



ಪುತ್ತೂರು:
ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ಖಾಸಗಿ ವಿದ್ಯಾಸಂಸ್ಥೆಯೊಂದರ ದೈಹಿಕ ಶಿಕ್ಷಣ ನಿರ್ದೇಶಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.
ಪುತ್ತೂರಿನ ಖಾಸಗಿ ವಿದ್ಯಾಸಂಸ್ಥೆಯೊಂದರ ದೈಹಿಕ ಶಿಕ್ಷಣ ನಿರ್ದೇಶಕ ಎಲ್ಯಾಸ್ ಪಿಂಟೋ ವಿರುದ್ಧ ಆರೋಪ ದಾಖಲಾಗಿದೆ.
ಈ ಘಟನೆ ಅಕ್ಟೋಬರ್ 23 ರಂದು ನಡೆದಿದ್ದು ಎನ್ನಲಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸಂತ್ರಸ್ತೆ ವಿದ್ಯಾರ್ಥಿನಿ ವಿದ್ಯಾಸಂಸ್ಥೆಗೆ ಸೇರಿದ ಹಾಸ್ಟೆಲ್‌ನಲ್ಲಿ ವಾಸ್ತವ್ಯವಿದ್ದಳು.
ವ್ಯಾಯಾಮ ಹೇಳಿಕೊಡುವ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ವರದಿಯಾಗಿದ್ದು, ಶಿಕ್ಷಕ ಕಿರುಕುಳ ನೀಡುತ್ತಿರುವ ಬಗ್ಗೆ ವಿದ್ಯಾರ್ಥಿನಿ ಪೋಷಕರಿಗೆ ಮಾಹಿತಿ ನೀಡಿದ್ದಾಳೆ. ಬಳಿಕ ಎಚ್ಚೆತ್ತ ವಿದ್ಯಾರ್ಥಿನಿಯ ಪೋಷಕರು ಆರೋಪಿ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಸದ್ಯ ಆರೋಪಿ ಎಲ್ಯಾಸ್ ಪಿಂಟೋನನ್ನು ಪೋಲಿಸರು ಬಂಧಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.