



ಶಂಕರನಾರಾಯಣ: ವ್ಯವಹಾರಕ್ಕಾಗಿ ಮಾಡಿದ ಸಾಲ ಹಾಗೂ ಅನಾರೋಗ್ಯದಿಂದ ಜೀವನದಲ್ಲಿ ಬೇಸತ್ತ ಯುವಕನೋರ್ವ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ತಾಲೂಕಿನ ಹಾಲಾಡಿ 28 ಗ್ರಾಮದ ಹಾಲಾಡಿಯಲ್ಲಿ ಎಂಬಲ್ಲಿ ನಡೆದಿದೆ. ತೀರ್ಥಹಳ್ಳಿ ತಾಲೂಕಿನ ಬಳಗೋಡು ಗ್ರಾಮದ ನಿವಾಸಿ 31ವರ್ಷದ ಮಧುಕರ ಕೆ.ಬಿ. ಆತ್ಮಹತ್ಯೆ ಮಾಡಿಕೊಂಡ ಯುವಕ.ಇವರು ಚಾಲಕ ವೃತ್ತಿ ಮತ್ತು ಸೈಬರ್ ಸೆಂಟರನ್ನು ಇಟ್ಟುಕೊಂಡು ವ್ಯವಹಾರ ನಡೆಸುತ್ತಿದ್ದರು. ಇದಕ್ಕಾಗಿ ಸಾಲವನ್ನು ಮಾಡಿಕೊಂಡಿದ್ದರು. ಆರೋಗ್ಯ ಕೂಡ ಸರಿ ಇರಲಿಲ್ಲ. ಇದೇ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲಿ ಯಾರಿಗೂ ಹೇಳದೆ, ಸೆ.2ರಂದು ಕುಂದಾಪುರದ ಹಾಲಾಡಿಗೆ ಬಂದು ಇಲಿ ಪಾಶಣ ಸೇವಿಸಿದ್ದರು. ಅಸ್ವಸ್ಥಗೊಂಡಿದ್ದ ಅವರನ್ನು ಕುಂದಾಪುರ ಎನ್.ಆರ್. ಆಚಾರ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಸೆ.3ರಂದು ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮಧುಕರ ಅವರು ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.