


ಕಾರ್ಕಳ: ಅಮೆಚೂರ್ ಕಬಡ್ಡಿ ಫೆಡರೇಷನ್ ಆಫ್ ಇಂಡಿಯಾ ವತಿಯಿಂದ ತೆಲಂಗಾಣದಲ್ಲಿ ಜೂನ್ 8ರಿಂದ 11ರವರೆಗೆ ನಡೆದ ರಾಷ್ಟ್ರಮಟ್ಟದ ಕಬಡ್ಡಿ ತೀರ್ಪುಗಾರರ ಪರೀಕ್ಷೆಯಲ್ಲಿ ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಫೆಡರೇಷನ್‌ನ ರಾಜ್ಯ ತೀರ್ಪುಗಾರರಾದ ಶಶಿಧರ್ ಶೆಟ್ಟಿ ಹಾಗೂ ಚೇತನ್ ಕುಮಾರ್ ಪಿ. ತೇರ್ಗಡೆ ಹೊಂದಿದ್ದಾರೆ.
ರಾಷ್ಟ್ರಮಟ್ಟದ ಪರೀಕ್ಷೆಯಲ್ಲಿ ಯಶಸ್ವಿಯಾಗಿ ಉತ್ತೀರ್ಣರಾದ ಇಬ್ಬರಿಗೂ ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಫೆಡರೇಷನ್‌ನ ಉಡುಪಿ ಜಿಲ್ಲಾ ತೀರ್ಪುಗಾರರು ಅಭಿನಂದನೆ ಸಲ್ಲಿಸಿ, ಮುಂದಿನ ಕ್ರೀಡಾ ಸೇವೆಗೆ ಶುಭ ಹಾರೈಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.