logo
WhatsApp Image 2026-04-02 at 14.46.04.jpeg
hindalco everlast.jpeg

ಶಿರ್ವ : ದ್ವಿಚಕ್ರ ವಾಹನಗಳ ನಡುವೆ ಅಪಘಾತ ಮಹಿಳೆ ಮೃತ್ಯು

ಟ್ರೆಂಡಿಂಗ್
share whatsappshare facebookshare telegram
13 Nov 2021
post image

ಶಿರ್ವ: ಎರಡು ದ್ವಿಚಕ್ರ ವಾಹನಗಳ ಮಧ್ಯೆ ನಡೆದ ಭೀಕರ ಅಪಘಾತದಲ್ಲಿ‌ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಸುಭಾಷ್ ನಗರದ ಕುರ್ಕಾಲು ಜಂಕ್ಷನ್ ನಲ್ಲಿ ಇಂದು ಸಂಭವಿಸಿದೆ.

ಮೃತರನ್ನು ಹೇರೂರು ಗ್ರಾಮದ ನಿವಾಸಿ ಶರ್ಮಿಳಾ (42) ಎಂದು ಗುರುತಿಸಲಾಗಿದೆ. ಇವರು ಉಡುಪಿ ವಿದ್ಯೋದಯ ಶಾಲೆಯಲ್ಲಿ ಪರಿಚಾರಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ಶರ್ಮಿಳಾ ಅವರು ಇಂದು ಬೆಳಿಗ್ಗೆ ತಮ್ಮ ಪತಿ ಸುರೇಶ್ ದೇವಾಡಿಗ ಅವರೊಂದಿಗೆ ಬೈಕ್ ನಲ್ಲಿ ಹೇರೂರಿನಿಂದ ಕಟಪಾಡಿ ಕಡೆಗೆ ಹೋಗುತ್ತಿದ್ದರು. ಕುರ್ಕಾಲು ಜಂಕ್ಷನ್ ಬಳಿ ಈ ಅಪಘಾತ ನಡೆದಿದೆ. ಎದುರಿನಿಂದ ಬಂದ ಬೈಕ್ ಸವಾರ ಯಾವುದೇ ಸೂಚನೆ ನೀಡದೆ ಒಮ್ಮೆಲೆ ಎಡಭಾಗಕ್ಕೆ ತಿರುಗಿಸಿದ ಪರಿಣಾಮ ಬೈಕ್ ನಿಯಂತ್ರಣ ಕಳೆದುಕೊಂಡು ಎದುರಿನ ಬೈಕ್ ಗೆ ಡಿಕ್ಕಿಯಾಗಿದೆ ಎನ್ನಲಾಗಿದೆ.

ಅಪಘಾತವಾದ ರಭಸಕ್ಕೆ ಶರ್ಮಿಳಾ ಅವರು ರಸ್ತೆಗೆ ಬಿದ್ದಿದ್ದು, ಇದರಿಂದ ಅವರು ಗಂಭೀರ ಗಾಯಗೊಂಡು ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.