logo
WhatsApp Image 2026-04-02 at 14.46.04.jpeg
hindalco everlast.jpeg

ಶಿರ್ವಾ : ಗಾಂಜಾ ಸೇವಿಸುತ್ತಿದ್ದ ನಾಲ್ವರು ಯುವಕರನ್ನು ವಶಕ್ಕೆ ಪಡೆದ ಪೊಲೀಸರು

ಟ್ರೆಂಡಿಂಗ್
share whatsappshare facebookshare telegram
25 Aug 2022
post image

ಶಿರ್ವಾ: ಗಾಂಜಾ ಸೇವನೆಗೆ ಸಂಬಂಧಿಸಿ ನಾಲ್ವರು ಯುವಕರನ್ನು ಶಿರ್ವಾ ಪೊಲೀಸರು ವಶಕ್ಕೆ ಪಡೆದ ಘಟನೆ ಶಿರ್ವಾ 92ನೇ ಹೇರೂರು ಬಳಿ ನಡೆದಿದೆ. ಪೊಲೀಸರು ವಶಕ್ಕೆ ಪಡೆದ ಆರೋಪಿಗಳನ್ನು 27ವರ್ಷದ ಸಚ್ಚಿನ್, 27ವರ್ಷದ ಅಲ್ವಿನ್ ಅಲ್ಮೇಡಾ, 26ವರ್ಷದ ಶಿವಪ್ರಸಾದ ಹಾಗೂ 26ವರ್ಷದ ನಬಿಲ್ ಸಾಮ್ಯ ಎಂದು ಗುರುತಿಸಲಾಗಿದೆ. ಈ ನಾಲ್ವರು ಆ.23ರಂದು ಹೇರೂರು ಬಳಿಯ ಸಾರ್ವಜನಿಕ ಸ್ಥಳದಲ್ಲಿ ಅಮಲು ಪದಾರ್ಥ ಸೇವಿಸಿದ್ದಂತೆ ಕಂಡುಬಂದಿದ್ದು, ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಡಿಸಿದ್ದಾರೆ. ಆ.24ರಂದು ಬಂದಿರುವ ವೈದ್ಯಕೀಯ ಪರೀಕ್ಷೆಯಲ್ಲಿ ನಾಲ್ವರು ಗಾಂಜಾ ಸೇವಿಸಿರುವುದು ದೃಢಪಟ್ಟಿದೆ. ಈ ಬಗ್ಗೆ ಶಿರ್ವಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.