



ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಂ(84) ಅವರು ಅನಾರೋಗ್ಯದಿಂದ ಇಂದು ಬೆಳಿಗ್ಗೆ ಆಸ್ಪತ್ರೆಯಲ್ಲಿ ಮೃತರಾಗಿದ್ದಾರೆ ಎಂದು ತಿಳಿದು ಬಂದಿದೆ.
ಶಿವರಾಂ ಇತ್ತೀಚಿಗೆ ಕಾರಿನಲ್ಲಿ ಹೊರಗಡೆ ಹೋಗಿದ್ದ ಸಂದರ್ಭ ಅಪಘಾತ ಸಂಭವಿಸಿ ತಲೆಗೆ ಸ್ವಲ್ಪ ಪೆಟ್ಟಾಗಿತ್ತು ಎನ್ನಲಾಗಿದೆ. ,ಮೂರು ದಿನಗಳ ಹಿಂದೆ ಕಾರಿನಲ್ಲಿ ಹೊರಗೆ ಹೋಗಿದ್ದ ವೇಳೆ ಕಾರ್ ಆಕ್ಸಿಡೆಂಟ್ ಆಗಿತ್ತು.ರೂಮ್‌ನಲ್ಲಿ ಬಿದ್ದ ಹಿನ್ನೆಲೆ ತಲೆಗೆ ಬಲವಾದ ಪೆಟ್ಟು ಬಿದ್ದು ಸ್ಕ್ಯಾನಿಂಗ್ ರಿಪೋರ್ಟ್‌ನಲ್ಲಿ ಮೆದುಳಿನಲ್ಲಿ ರಕ್ತಸ್ರಾವವಾಗಿತ್ತು. ಬೆಂಗಳೂರಿನ ಹೊಸಕೆರೆಹಳ್ಳಿ ಕ್ರಾಸ್ ಬಳಿ ಇರುವ ಪ್ರಶಾಂತ್ ಆಸ್ಪತ್ರೆಯಲ್ಲಿ ಶಿವರಾಂ ದಾಖಲಿಸಲಾಗಿತ್ತು
ಸುಮಾರು ಆರು ದಶಕಗಳಿಂದ ಪೋಷಕ ನಟನಾಗಿ ಅನೇಕ ಸಿನಿಮಾಗಳಲ್ಲಿ ಶಿವರಾಂ ನಟಿಸಿದ್ದರು, ನಟನೆ, ನಿರ್ದೇಶನ, ನಿರ್ಮಾಪಕನಾಗಿಯೂ ಶಿವರಾಂ ಕನ್ನಡ ಚಿತ್ರರಂಗಕ್ಕೆ ಕೊಡುಗೆ ನೀಡಿದ್ದಾರೆ. ಶಿವರಾಂಗೆ 84 ವರ್ಷ ವಯಸ್ಸಾಗಿತ್ತು
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.