



ಉಡುಪಿ: ನಗರಸಭೆಯ ಅಭಿಯಂತರ ದಿವಾಕರ್ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಕೇಂದ್ರ ಸಚಿವೆ ಹಾಗೂ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಉಡುಪಿ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ.
ಕಾಮಗಾರಿಯೊಂದರ ವಿಳಂಬಕ್ಕೆ ನನ್ನನ್ನು ಹೊಣೆಗಾರನನ್ನಾಗಿ ಮಾಡಿದ್ದಲ್ಲದೆ, ನನ್ನ ಹೆಸರನ್ನು ಸಾರ್ವಜನಿಕವಾಗಿ ದುರ್ಬಳಕೆ ಮಾಡಿದ್ದಾರೆ ಎಂದು ಅಭಿಯಂತರ ದಿವಾಕರ್ ವಿರುದ್ಧ ಸಚಿವೆ ಶೋಭಾ ಆರೋಪ ಮಾಡಿದ್ದಾರೆ. ಈ ಬಗ್ಗೆ ಕ್ರಮಕೈಗೊಳ್ಳುವಂತೆ
ಜಿಲ್ಲಾಧಿಕಾರಿ ಕೂರ್ಮಾ ರಾವ್ ಅವರಿಗೆ ಲಿಖಿತ ರೂಪದಲ್ಲಿ ಪತ್ರ ಬರೆದು ಸಚಿವರು ಸೂಚನೆ ನೀಡಿದ್ದಾರೆ.
ಉಡುಪಿ ನಗರಸಭೆಯಲ್ಲಿ ಅಭಿಯಂತರರಾಗಿ ಕೆಲಸ ಮಾಡುತ್ತಿರುವ ದಿವಾಕರ್ ಎಂಬವರು ಕಾಮಗಾರಿ ವಿಳಂಬಕ್ಕೆ ಹಾಗೂ ಇತರೆ ಸಂಬಂಧಿಸಿದ ವಿಚಾರಕ್ಕಾಗಿ ತೊಂದರೆ ಕೊಡಲು ನನ್ನ ಹೆಸರನ್ನು ದುರ್ಬಳಕೆ ಮಾಡಿಕೊಂಡಿರುವುದು ಗಮನಕ್ಕೆ ಬಂದಿದೆ. ಆದ್ದರಿಂದ ಈ ವಿಚಾರವನ್ನು ಕಾನೂನಾತ್ಮಕವಾಗಿ ಪರಿಶೀಲಿಸಿ ಶೀಘ್ರವೇ ಅಭಿಯಂತರ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ ಪತ್ರದಲ್ಲಿ ಸಚಿವರು ಸೂಚಿಸಿದ್ದಾರೆ.

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.