



ಕಾರ್ಕಳ : ಕರ್ನಾಟಕ ರಾಜ್ಯ ಆರ್ಯ ಈಡಿಗ ಮಹಾಸಂಸ್ಥಾನ ರೇಣುಕಾ ಪೀಠ ನಾರಾಯಣಗುರು ಮಠ ಸೋಲೂರು ಬೆಂಗಳೂರು ಇದರ ಪೀಠಾಧಿಪತಿಗಳಾಗಿ ಪೀಠಾರೋಹಣಗೈದಿರುವ ಶ್ರೀ ವಿಖ್ಯಾತಾನಂದ ಸ್ವಾಮೀಜಿಯವರು ಬಲ್ಯೊಟ್ಟುವಿನ ಮೂಲಮಠಕ್ಕೆ ಆಗಮಿಸುತ್ತಿದ್ದು ಇವರ ಪುರಪ್ರವೇಶ ಹಾಗೂ ಗುರುವಂದನಾ ಕಾರ್ಯಕ್ರಮವು ಫೆ. ೨೦ರಂದು ಗುರುಕೃಪಾ ಸೇವಾಶ್ರಮ ಬಲ್ಯೊಟ್ಟು ಹೊಸ್ಮಾರು ಇಲ್ಲಿ ನಡೆಯಲಿದೆ ಎಂದು ಗುರುವಂದನಾ ಸಮಿತಿಯ ಗೌರವಾಧ್ಯಕ್ಷರಾದ ಭಾಸ್ಕರ ಎಸ್. ಕೋಟ್ಯಾನ್ ಹೇಳಿದರು. ಫೆ. ೧೭ ರಂದು ಬಲ್ಯೊಟ್ಟು ಗುರುಕೃಪಾ ಸೇವಾಶ್ರಮದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಫೆ. ೨೦ರಂದು ಮಧ್ಯಾಹ್ನ ೩.೦೦ಗಂಟೆಗೆ ಹೊಸ್ಮಾರು ಜಂಕ್ಷನ್‌ನಿAದ ಪೂಜ್ಯರ ಪುರಪ್ರವೇಶ ಆಗಲಿದ್ದು ಅಲ್ಲಿಂದ ಮೂಲಮಠದವರೆಗೆ ವಿಶೇಷ ಮೆರವಣಿಗೆಯೊಂದಿಗೆ ಕರೆತರಲಾಗುವುದು ಎಂದರು. ನಂತರ ಸಭಾ ಕಾರ್ಯಕ್ರಮ ನಡೆಯಲಿದ್ದು ಮುಖ್ಯ ಅತಿಥಿಗಳಾಗಿ ಮೀನುಗಾರಿಗೆ ಹಾಗೂ ಒಳನಾಡು ಸಾರಿಗೆ ಸಚಿವರಾದ ಎಸ್, ಅಂಗಾರ, ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ವಿ. ಸುನಿಲ್ ಕುಮಾರ್, ಭಾಗವಹಿಸಲಿದ್ದಾರೆ. ಮೂಡುಬಿದಿರೆ ಕ್ಷೇತ್ರ ಶಾಸಕರಾದ ಉಮಾನಾಥ ಕೋಟ್ಯಾನ್, ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಗುರುವಂದನಾ ಸಮಿತಿಯ ಅಧ್ಯಕ್ಷರಾದ ವಸಂತ ಭಟ್, ಕಾರ್ಯಾಧ್ಯಕ್ಷರಾದ ಗಂಗಾಧರ ಮಿತ್ತಮಾರ್, ಪುರುಷೋತ್ತಮ್ ರಾವ್, ಕಾರ್ಯದರ್ಶಿ ಕೃಷ್ಣಕುಮಾರ್, ಎಸ್‌ಡಿಎಂಸಿ ಅಧ್ಯಕ್ಷರಾದ ಜಯವರ್ಮ ಜೈನ್, ಪ್ರಾಂಶುಪಾಲ ರೋಹಿತ್ ಕುಮಾರ್, ಮುಖ್ಯೋಪಾಧ್ಯಾಯರು ಉಪಸ್ಥಿತರಿದ್ದರು
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.