logo
WhatsApp Image 2026-04-02 at 14.46.04.jpeg
hindalco everlast.jpeg

ಸಿದ್ದಾಪುರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿ ಆತ್ಮಹತ್ಯೆ

ಟ್ರೆಂಡಿಂಗ್
share whatsappshare facebookshare telegram
3 Aug 2022
post image

ಶಂಕರನಾರಾಯಣ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದ  ಸಿದ್ದಾಪುರ  ಹಿಂದೂ ರುದ್ರಭೂಮಿ ಬಳಿ ನಡೆದಿದೆ. ಮೃತರನ್ನು ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ನಿವಾಸಿ 33ವರ್ಷದ ವಿಜಯ ಕಾಂಬ್ಳೆ ಎಂದು ಗುರುತಿಸಲಾಗಿದೆ. ಇವರು ವಿಪರೀತ  ಶರಾಬು ಕುಡಿಯುವ  ಚಟ ಹೊಂದಿದ್ದು, ಊರಿನಲ್ಲಿ ಸರಿಯಾದ ಕೆಲಸ ಇಲ್ಲದೆ ಕಾರಣ ಬೇರೆ ಊರುಗಳಿಗೆ ಹೋಗಿ ಕೆಲಸ ಮಾಡುತ್ತಿದ್ದರು. ತನಗಿರುವ ಕುಡಿತದ ಚಟದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಜುಲೈ 1ರಂದು ಸಿದ್ದಾಪುರ  ಹಿಂದೂ  ರುದ್ರ ಭೂಮಿ ಬಳಿಯ ಕಟ್ಟಡದಲ್ಲಿ  ನೇಣುಬಿಗಿದುಕೊಂಡು ಆತ್ಮಹತ್ಯೆ  ಮಾಡಿಕೊಂಡಿದ್ದಾರೆ‌. ಈ ಬಗ್ಗೆ ಶಂಕರನಾರಾಯಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.