



ಕಾರ್ಕಳ: ಮುಂದಿನ ಚುನಾವಣೆಯಲ್ಲಿ ಸೋಲಿನ ಭಯದಿಂದ ಸಿದ್ದರಾಮಯ್ಯನವರು ಮಾನಸಿಕ ಸ್ಥಿಮಿತತೆ ಕಳೆದುಕೊಂಡು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಬಿಜೆಪಿಯವರಿಗೆ ಸೋಲಿನ ಭಯ ಕಾಡುತ್ತಿದೆ, ಆದ್ದರಿಂದ ಪ್ರಧಾನಿ ಮೋದಿಯವರನ್ನು ಪದೇಪದೇ ರಾಜ್ಯಕ್ಕೆ ಕರೆಸಿಕೊಳ್ಳುತ್ತಿದ್ದಾರೆ ಎಂದು ಸಿದ್ದರಾಮಯ್ಯನವರ ಆರೋಪಕ್ಕೆ ಪ್ರತಿಕ್ರಿಯಿಸಿ ಮಾತನಾಡಿದರು. ರಾಹುಲ್ ಗಾಂಧಿ ಹೋದಕಡೆ ಜನರು ಸೇರುತ್ತಿಲ್ಲ ಹಾಗಾಗಿ ಸಿದ್ದರಾಮಯ್ಯನವರು ಹತಾಶೆಯಿಂದ ಇಂತಹ ಹೇಳಿಕೆ ನೀಡಿದ್ದಾರೆ ಎಂದರು. ಬಳಿಕ ಅವರು ಉಡುಪಿ ಜಿಲ್ಲಾ ಪತ್ರಕರ್ತರ ಸಂಘದ ರಜತ ಮಹೋತ್ಸವದ ಅಂಗವಾಗಿ ಸಂಘದ ಲೋಗೋ ಬಿಡುಗಡೆಗೊಳಿಸಿ ಉಡುಪಿ ಜಿಲ್ಲಾ ಪತ್ರಕರ್ತರ ಸಂಘಕ್ಕೆ 25 ವರ್ಷಗಳು ತುಂಬಿರುವುದು ಸಂತಸದ ವಿಚಾರ.ಗ್ರಾಮೀಣ ಪತ್ರಕರ್ತರಿಗೆ ಸರಕಾರದಿಂದ ಎಲ್ಲಾ ಸವಲತ್ತುಗಳನ್ನು ನೀಡಲಾಗುವುದು ಎಂದರು. ಈ ಸಂದರ್ಭದಲ್ಲಿ ಕಾರ್ಕಳ ಪತ್ರಕರ್ತರ ಸಂಘಕ್ಕೆ ನಿವೇಶನ ಮಂಜೂರಾತಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸಚಿವರಾದ ಸುನಿಲ್ ಕುಮಾರ್, ಎಸ್ ಅಂಗಾರ ಮುಂತಾದವರು ಉಪಸ್ಥಿತರಿದ್ದರು
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.