



ಬೆಂಗಳೂರು: ರಾಜ್ಯದ ಲ್ಲಿ ಎಲ್ಲಾ ವಿ.ವಿ.ಗಳು ಮತ್ತು ಕಾಲೇಜುಗಳು ಏಕರೂಪದ ಟೈಮ್ ಟೆಬಲ್ ಜಾರಿಗೆ ಬರಲಿದ್ದು ಈ ವರ್ಷ ದಿಂದಲೆ ವರ್ಷದಿಂದ ಜಾರಿಗೆ ಬರಲಿದೆ. ಇದನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ
ವೇಳಾಪಟ್ಟಿ ಯಲ್ಲಿ ಹೀಗಿದೆನೋಡಿ . ಈ ವೇಳಾಪಟ್ಟಿಯಲ್ಲಿ ಪ್ರತಿ ಸೆಮಿಸ್ಟರ್‌ಗಳ ಆರಂಭ, ದಂಡ ರಹಿತ ಮತ್ತು ದಂಡ ಸಹಿತ ಪ್ರವೇಶದ ಅವಧಿ, ಪ್ರತಿ ಸೆಮಿಸ್ಟರ್‌ಗಳಿಗೆ ಬೋಧನಾ ತರಗತಿಗಳು ಆರಂಭವಾಗುವ ಮತ್ತು ಮುಗಿಯುವ ದಿನ, ಪರೀಕ್ಷೆ ಆರಂಭವಾಗುವ ದಿನ, ಮೌಲ್ಯಮಾಪನ ಆರಂಭ ಮತ್ತು ಫಲಿತಾಂಶ ಪ್ರಕಟಣೆಯ ದಿನ, ರಜೆ ಆರಂಭದ ದಿನಗಳನ್ನು ಸ್ಪಷ್ಟವಾಗಿ ನಿಗದಿಪಡಿಸಲಾಗಿದೆ
ಜುಲೈ 11 ರಿಂದ ಪ್ರವೇಶಾತಿ ಪ್ರಾರಂಭವಾಗಲಿದೆ. ಆಗಸ್ಟ್ 17 ರಿಂದ 22 ರ ನಡುವೆ ತರಗತಿಗಳು ಪ್ರಾರಂಭವಾಗಲಿವೆ. ಇದೇ ರೀತಿಯಲ್ಲಿ, ಸ್ನಾತಕೋತ್ತರ ಕೋರ್ಸ್‌ಗಳಿಗೆ ಅಕ್ಟೋಬರ್ 15 ರಿಂದ ಪ್ರವೇಶ ಪ್ರಕ್ರಿಯೆ ಆರಂಭವಾಗಲಿದೆ, ನವೆಂಬರ್ 2 ರಿಂದ 14 ರ ನಡುವೆ ತರಗತಿಗಳಿಗೆ ಚಾಲನೆ ಸಿಗಲಿದೆ.
ಸೆಮಿಸ್ಟರುಗಳ ಆರಂಭ, ದಂಡರಹಿತ ಮತ್ತು ದಂಡ ಸಹಿತ ಪ್ರವೇಶದ ಅವಧಿ, ಪ್ರತಿ ಸೆಮಿಸ್ಟರ್ ಗಳಿಗೆ ಬೋಧನಾ ತರಗತಿಗಳು ಪ್ರಾರಂಭವಾಗುವ ಮತ್ತು ಮುಗಿಯುವ ದಿನ, ಪರೀಕ್ಷೆ ಪ್ರಾರಂಭವಾಗುವ ದಿನ, ಪರೀಕ್ಷೆಯ ಪ್ರಾರಂಭ ಮತ್ತು ಫಲಿತಾಂಶ ಪ್ರಕಟಣೆಯ ದಿನ, ರಜೆ ಪ್ರಾರಂಭದ ದಿನಗಳಲ್ಲಿ ಸೂಚಿಸಲಾಗಿದೆ
ಪದವಿ 6, ಸ್ನಾತಕೋತ್ತರ ಮಟ್ಟದ 4 ಮತ್ತು ವೃತ್ತಿಪರ ಕೋರ್ಸ್‌ಗಳು 8 ಸೆಮಿಸ್ಟರುಗಳನ್ನು ಗಣನೆಗೆ ತೆಗೆದುಕೊಳ್ಳಲಾಗಿದೆ. ಸೆಮಿಸ್ಟರ್ ಮುಗಿದ ನಂತರದ ಅವಧಿಯ ಪರೀಕ್ಷಾ ಕರ್ತವ್ಯ ಬಂದರೆ, ಉಪನ್ಯಾಸಕರು ಕರ್ತವ್ಯವನ್ನು ನಿರ್ವಹಿಸಬೇಕಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.