logo
WhatsApp Image 2026-04-02 at 14.46.04.jpeg
hindalco everlast.jpeg

ಸುಧೀರ್ಘ ಉಪವಾಸ ಸತ್ಯಾಗ್ರಹದ ಬಳಿಕ ಆಸ್ಪತ್ರೆಗೆ ದಾಖಲಾದ ಸೋನಮ್ ವಾಂಗ್ಚುಕ್

ಟ್ರೆಂಡಿಂಗ್
share whatsappshare facebookshare telegram
18 Jul 2026
post image

ನವದೆಹಲಿ: ಜಂತರ್ ಮಂತರ್‌ನಲ್ಲಿ ಕಳೆದ 20 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಅವರನ್ನು ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಯುತ್ತಿದ್ದು, ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಮುಂದುವರಿಸಿದ್ದರು. ಆರೋಗ್ಯದಲ್ಲಿ ಗಂಭೀರ ಹಿನ್ನಡೆ ಕಂಡುಬಂದ ಹಿನ್ನೆಲೆಯಲ್ಲಿ, ದೆಹಲಿ ಹೈಕೋರ್ಟ್ ನಿರ್ದೇಶನ ಹಾಗೂ ತಜ್ಞ ವೈದ್ಯರ ಸಲಹೆಯ ಮೇರೆಗೆ ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ವೈದ್ಯಕೀಯ ಆರೈಕೆಗಾಗಿ ವಾಂಗ್ಚುಕ್ ಅವರನ್ನು ಸುರಕ್ಷಿತವಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ವೇಳೆ ಜಂತರ್ ಮಂತರ್ ಪ್ರದೇಶವನ್ನು ಶಾಂತಿಯುತವಾಗಿ ತೆರವುಗೊಳಿಸುವಂತೆ ಪ್ರತಿಭಟನಾಕಾರರಿಗೆ ಪೊಲೀಸರು ಮನವಿ ಮಾಡಿದ್ದಾರೆ.

ಹೈಕೋರ್ಟ್ ಆದೇಶ ಜಾರಿಗೊಳಿಸುವ ವೇಳೆ ಕೆಲ ಪ್ರತಿಭಟನಾಕಾರರು ಅಡಚಣೆ ಉಂಟುಮಾಡಲು ಯತ್ನಿಸಿದ್ದು, ಸ್ವಲ್ಪ ಸಮಯ ಗದ್ದಲದ ವಾತಾವರಣ ನಿರ್ಮಾಣವಾಯಿತು. ಆದರೆ ಪೊಲೀಸರು ಸಂಯಮದಿಂದ ಪರಿಸ್ಥಿತಿಯನ್ನು ನಿಯಂತ್ರಿಸಿ ವಾಂಗ್ಚುಕ್ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಎರಡು ದಿನಗಳ ಹಿಂದೆ ವಾಂಗ್ಚುಕ್ ಅವರ ಆರೋಗ್ಯದ ಬಗ್ಗೆ ಪ್ರತಿದಿನ ವೈದ್ಯಕೀಯ ತಪಾಸಣೆ ನಡೆಸುವಂತೆ ಹೈಕೋರ್ಟ್ ಅಧಿಕಾರಿಗಳಿಗೆ ಸೂಚಿಸಿತ್ತು. ಶುಕ್ರವಾರ ವೈದ್ಯರು ನಡೆಸಿದ ಪರೀಕ್ಷೆಯಲ್ಲಿ, ಅವರ ಆರೋಗ್ಯ ಗಂಭೀರವಾಗಿದ್ದು ಅಂಗಾಂಗಗಳ ಕಾರ್ಯಕ್ಷಮತೆ ಕುಸಿಯುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.