



ಕಾರ್ಕಳ : ತಾಲೂಕು ಹತ್ತೊಂಬತ್ತನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಶಿಶುಸಾಹಿತಿ ಸೂಡ ಸದಾನಂದ ಶೆಣೈ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಈಗಾಗಲೇ ಇವರು ಅನೇಕ ಮಕ್ಕಳ ಫದ್ಯಗಳನ್ನು ಮಕ್ಕಳ ನಾಟಕಗಳನ್ನು ರಚಿಸಿ ಪ್ರಕಟಿಸಿದ್ದಾರೆ. ತಾಲೂಕಿನ ಶಾಲೆಗಳಿಗೆ ಹೋಗಿ ಉಚಿತ ಪುಸ್ತಕಗಳನ್ನು ನೀಡಿ ಮತ್ತು ಆಶು ಕವಿತೆಗಳನ್ನು ಹಾಡಿ ಕತೆಗಳನ್ನು ಹೇಳಿ ವಿದ್ಯಾರ್ಥಿಗಳಲ್ಲಿ ಕನ್ನಡಾಭಿಮಾನ ಮೂಡಿಸಲು ಶ್ರಮಿಸಿದ್ದರು. ಸುಧೀರ್ಘ ಕಾಲ ಶಿಕ್ಷಕರಾಗಿಯೂ ಸೇವೆ ಸಲ್ಲಿಸಿರುವ ಇವರು ಮಕ್ಕಳ ನಾಟಕಗಳನ್ನು ಬರೆದು ನಿರ್ದೇಶಿಸಿದ್ದಾರೆ. ನಾಟಕ ಕಲಾವಿದರಾಗಿರುವ ಇವರು ಅನೇಕ ಸಾಹಿತ್ಯ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಸಂಘಟಿಸಿರುತ್ತಾರೆ.ಸಾಹಿತ್ಯ ಸಮ್ಮೇಳನವು ದಶಂಬರ 3 ಆದಿತ್ಯ ವಾರದಂದು ಜ್ಞಾನ ಸುಧಾ ಪದವಿ ಪೂರ್ವ ಕಾಲೇಜು ಗಣಿತ ನಗರ ಕುಕ್ಕುಂದೂರು ಕಾರ್ಕಳ ಇಲ್ಲಿ ನಡೆಯಲಿದೆ ಎಂದು ಕಸಾಪ ಉಡುಪಿ ಜಿಲ್ಲಾಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ ಹಾಗೂ ಕಾರ್ಕಳ ತಾಲೂಕು ಘಟಕದ ಅಧ್ಯಕ್ಷ ರಾದ ಕೊಂಡಳ್ಳಿ ಪ್ರಭಾಕರ ಶೆಟ್ಟಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.