



Southern Railway Recruitment 2023:ಉದ್ಯೋಗಾಂಕ್ಷಿಗಳಿಗೆ ಬಹು ಮುಖ್ಯ ಮಾಹಿತಿ ಇಲ್ಲಿದೆ. ಇಂದಿನ ಕಾಲದಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳುವುದೇ ದೊಡ್ದ ಸವಾಲಾಗಿ ಪರಿಣಮಿಸಿದೆ. ಪೈಪೋಟಿಯ ಜೊತೆಗೆ ಸ್ಪರ್ಧಾತ್ಮಕ ಯುಗದಲ್ಲಿ ಒಂದು ನೌಕರಿ ಪಡೆಯೋದೆ ದೊಡ್ಡ ಹರಸಾಹಸ. ನೀವೇನಾದರೂ ರೈಲ್ವೆ ಇಲಾಖೆಯಲ್ಲಿ ನೌಕರಿ ಪಡೆಯೂಲು ಹುಡುಕುತ್ತಿರುವರಿಗೆ ಭರ್ಜರಿ ಸಿಹಿ ಸುದ್ದಿ ಇಲ್ಲಿದೆ.
ದಕ್ಷಿಣ ರೈಲ್ವೆಯು (Southern Railway) ಖಾಲಿ ಇರುವ ಹುದ್ದೆಗಳನ್ನು (Southern Railway Recruitment 2023)ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ ಮಾಡಿದ್ದು ಒಟ್ಟು 24 ಸ್ಟೆನೋಗ್ರಾಫರ್ ಗ್ರೇಡ್ III (Stenographer Grade-3) ಹುದ್ದೆಗಳು ಖಾಲಿಯಿವೆ. ಆಸಕ್ತರು ಆನ್ಲೈನ್ (Online) ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಮೇ 8, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಸಂಸ್ಥೆ – ದಕ್ಷಿಣ ರೈಲ್ವೆ ಹುದ್ದೆ – ಸ್ಟೆನೋಗ್ರಾಫರ್ ಗ್ರೇಡ್ III ಒಟ್ಟು – ಹುದ್ದೆ 24 ವಿದ್ಯಾರ್ಹತೆ – ಪಿಯುಸಿ ಉದ್ಯೋಗದ ಸ್ಥಳ – ತಮಿಳುನಾಡು
ಆಸಕ್ತ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಕೆಗೆ ಮೇ 06 ಏಪ್ರಿಲ್ 2023 ಆರಂಭಿಕ ದಿನವಾಗಿದ್ದು, ಮೇ 8, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ದಕ್ಷಿಣ ರೈಲ್ವೆ ನೇಮಕಾತಿ ಅಧಿಸೂಚನೆಯ ಅನುಸಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪಿಯುಸಿ ಪೂರ್ಣಗೊಳಿಸಿರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಮಿಳುನಾಡಿನ ಚೆನ್ನೈ, ಮಧುರೈ, ತಿರುಚಿನಾಪಳ್ಳಿ ಈ ಸ್ಥಳಗಳಲ್ಲಿ ನೌಕರಿ ಸಿಗಲಿದೆ. ದಕ್ಷಿಣ ರೈಲ್ವೆ ನೇಮಕಾತಿ ಅಧಿಸೂಚನೆಯಂತೆ ಅಭ್ಯರ್ಥಿಗಳ ವಯಸ್ಸು ಗರಿಷ್ಠ 42 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಿದೆ. ಈ ಹುದ್ದೆಗೆ ವೇತನ ಇನ್ನೂ ನಿಗದಿ ಮಾಡಿಲ್ಲ. ಈ ಹುದ್ದೆಗಳಿಗೆ ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆರಿಸಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನದ ಮೊದಲೇ ಅರ್ಜಿ ಸಲ್ಲಿಸುವುದು ಉತ್ತಮ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.