logo
WhatsApp Image 2026-04-02 at 14.46.04.jpeg
hindalco everlast.jpeg

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ : ನೈರುತ್ಯ ಮುಂಗಾರು ಚುರುಕು ಅ.22 ವರೆಗೂ ರಾಜ್ಯದಲ್ಲಿ ಎಲ್ಲೋ ಎಲರ್ಟ್

ಟ್ರೆಂಡಿಂಗ್
share whatsappshare facebookshare telegram
19 Oct 2021
post image

ಚಿತ್ರ: ಅಪುಲ್ ಇರಾ

ಬೆಂಗಳೂರು:ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯ ಆರ್ಭಟ ಹೆಚ್ಚಿದೆ. ನೈರುತ್ಯ ಮುಂಗಾರು ಕರಾವಳಿ ಭಾಗದಲ್ಲಿ ಹೆಚ್ಚಿನ ಪರಿಣಾಮ ಬೀರಲಿದೆ. ಅಲ್ಲದೇ ಅರಬ್ಬೀ ಸಮುದ್ರದ ವಾಯುಭಾರ ಕುಸಿತದ ಕಾರಣ ಮಳೆ ಹೆಚ್ಚಿನ ದಿನ ಮುಂದುವರೆಯಲಿದೆ.ಹಾಗಾಗಿ ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ 22ರವರೆಗೂ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕ ಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ಕೋಲಾರ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆ ಮುಂದುವರೆಯಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.