logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಸ್ಪಂದನಾ ಟ್ರಸ್ಟ್ ಇನ್ಫೆಂಟ್ ಮೇರಿಸ್ ಕಾನ್ವೆಂಟ್ ಜೆಪ್ಪು: 52 ನೇ ವಾರ್ಷಿಕೋತ್ಸವ

ಟ್ರೆಂಡಿಂಗ್
share whatsappshare facebookshare telegram
8 Dec 2023
post image

ಮಂಗಳೂರು: ಸ್ಪಂದನಾ ಟ್ರಸ್ಟ್ ಇನ್ಫೆಂಟ್ ಮೇರಿಸ್ ಕಾನ್ವೆಂಟ್ ಜೆಪ್ಪು, ತಮ್ಮ ಸಂಸ್ಠೆಯ 52 ನೇ ವಾರ್ಷಿಕೋತ್ಸವವನ್ನು ಹಾಗೂ ಕ್ರಿಸ್ಮಸ್ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಿದರು. ಭಗಿನಿ ಸಿಲ್ವಿಯಾ ಪೆರ್ನಾಂಡಿಸ್ ಇವರು ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿ, ನೆರೆದ ಸ್ವ-ಸಹಾಯ ಸಂಘದ ಮಹಿಳೆಯರನ್ನು ಹಾಗೂ ಮಕ್ಕಳನ್ನು ಉದ್ದೇಶಿಸಿ ಮಾತನಾಡುತ್ತಾ, ಪ್ರಿಯ ಮಹಿಳೆಯರೇ, ನೀವು ಸದಾ ನಿಮ್ಮ ಮಕ್ಕಳ ಹಾಗೂ ನಿಮ್ಮ ಕುಟುಂಬದ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದು, ಸಂಸ್ಥೆಯು ಸದಾ ನಿಮ್ಮ ಬಗ್ಗೆ, ನಿಮ್ಮ ಹಾಗೂ ಮಕ್ಕಳ ಬಗ್ಗೆ ಕಾಳಜಿ ವಹಿಸಿ, ಮಕ್ಕಳ ವಿದ್ಯಾಭ್ಯಾಸ, ಸರಕಾರದಿಂದ ಸಿಗುವ ಸೌಲಭ್ಯಗಳ ಲಭ್ಯತೆ, ಅಭಿವೃದ್ಧಿ ಕಾರ್ಯಕ್ರಮಗಳನ್ನು ಆಯೋಜಿಸಿ ಅವುಗಳನ್ನು ನಿಮ್ಮದಾಗಿಸಲು ಶ್ರಮಿಸುತ್ತಾರೆ. ನೀವು ನಿಮ್ಮ ಕಾಲ ಮೇಲೆ ನಿಂತು ಸ್ವಾಲಂಬನೆ ಸಾಧಿಸುವುದೇ ಸಂಸ್ಥೆಯ ಉದ್ದೇಶವಾಗಿದೆ.

ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ ಡಾ| ಸಿಡ್ನಿ ಡಿಸೋಜ, ಪ್ರೊಫೆಸರ್ ಜನರಲ್ ಮೆಡಿಸಿನ್, ಯೆನೆಪೋಯ ಮೆಡಿಕಲ್ ಕಾಲೇಜ್ ದೇರಳಕಟ್ಟೆ, ಇವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ, ಸ್ಪಂದನ ಟ್ರಸ್ಟಿನ ಕೆಲಸ, ಕಾರ್ಯವೈಖರಿ ಹಾಗೂ ಅವರು ಪಡುವ ಶ್ರಮಕ್ಕೆ ದೇವರು 100 ಪಟ್ಟು ಆಶೀರ್ವಾದಿಸಲಿ ಎಂದು ಹಾರೈಸಿದರು.

ವಂದನೀಯ ಗುರು ವಿನ್ಸೆಂಟ್ ಡಿ ಸೋಜ, ನಿರ್ದೇಶಕರು ಸಿ.ಒ.ಡಿ.ಪಿ, ಇವರು ನೆರೆದ ಸರ್ವರಿಗೂ ನಮ್ಮಲ್ಲಿ ತ್ಯಾಗ, ಪ್ರೀತಿ, ವಿಶ್ವಾಸ, ಶಾಂತಿ, ಸಹನೆ, ಕರುಣೆ, ಮಮತೆ ಇವೆಲ್ಲ ನಮ್ಮ ಜೀವನದಲ್ಲಿದ್ದು ಸನ್ಮಾರ್ಗದಲ್ಲಿ ನಡೆಯಲು ಪ್ರಯತ್ನಿಸೋಣ. ಬಾಲ ಯೇಸು ನಮ್ಮ ಕಷ್ಟ ಕಾರ್ಪಣ್ಯಗಳನ್ನು ನಿವಾರಿಸಿ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳುವಂತೆ ನಮ್ಮನ್ನು ಹರಸಲಿ.

ಸ್ಪಂದನಾ ಟ್ರಸ್ಟಿನ ಆಡಳಿತಾಧಿಕಾರಿ ಭಗಿನಿ ಹೆಲೆನ್ ಫೆರ್ನಾಂಡಿಸ್ ರವರು ತಮ್ಮ ಕನ್ಯಾಜೀವನದ ಸ್ವರ್ಣ ಮಹೋತ್ಸವವನ್ನು ಆಚರಿಸುವ ಸಂದರ್ಭದಲ್ಲಿ ಇವರನ್ನು ಸಂಸ್ಥೆಯ ಸಿಬ್ಬಂದಿ ವರ್ಗದವರು ಸನ್ಮಾನಿಸಿ ಗೌರವಿಸಿದರು. ಇದರೊಂದಿಗೆ ಅನೇಕ ಮನೋರಂಜನೆ ಕಾರ್ಯಕ್ರಮಗಳನ್ನು ಹಮ್ಮಿಕೊಂಡರು.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.