



ಮಂಗಳೂರು: ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ. ಖಾದರ್ ಇಂಡಿಯನ್ ಕಾನ್ಫರೆನ್ಸ್ ಆಫ್ ಇಂಟಲೆಕ್ಚುವಲ್ಸ್ ಅವರು ನೀಡುವ “ದಿ ಗ್ರೇಟ್ ಸನ್ ಆಫ್ ಇಂಡಿಯಾ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ರವಿವಾರ ದಿಲ್ಲಿಯ ಇಂಡಿಯಾ ಇಂಟರ್ ನ್ಯಾಶನಲ್ ಸೆಂಟರ್ ನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ.
ಒಡಿಶಾ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ವಿ.ಗೋಪಾಲ ಗೌಡ ಮತ್ತು ಭಾರತೀಯ ಬುದ್ಧಿಜೀವಿಗಳ ಸಮ್ಮೇಳನದ ರಾಷ್ಟ್ರೀಯ ಅಧ್ಯಕ್ಷರು ಪ್ರಶಸ್ತಿ ಪ್ರದಾನ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಯಾಗಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ಭಾಗವಹಿಸಲಿದ್ದಾರೆ. ಛತ್ತೀಸ್‌ಗಢ ರಾಜ್ಯಪಾಲ ಬಿಸ್ವ ಭೂಷಣ ಹರಿಚರಣ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಅವರ ಆತ್ಮಚರಿತ್ರೆಯ ಇಂಗ್ಲಿಷ್ ಅನುವಾದ ‘ಬ್ಯಾಟಲ್ ನಾಟ್ ಓವರ್’ ಸಹ ಇದೇ ಸಂದರ್ಭದಲ್ಲಿ ಬಿಡುಗಡೆಯಾಗಲಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.