


ಹೆಬ್ರಿ : ಕ್ಲಸ್ಟರ್ ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟವು ಹೆಬ್ರಿ ಎಸ್.ಆರ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಕ್ರೀಡಾಂಗಣದಲ್ಲಿ ಜರುಗಿತು. ಎಸ್.ಆರ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಎಚ್.ನಾಗರಾಜ ಶೆಟ್ಟಿ ಅವರು ಉದ್ಘಾಟಿಸಿ, ವಿದ್ಯಾರ್ಥಿಗಳು ಕ್ರೀಡಾ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು. ಸೋಲು ಗೆಲುವು ಸಹಜ ಅದನ್ನು ಧನಾತ್ಮಕವಾಗಿ ಸ್ವೀಕರಿಸುವ ಮನಸ್ಸಿರಬೇಕು. ಕ್ರೀಡೆಯಲ್ಲಿ ಶಿಸ್ತು ಸಂಯಮ ಅತೀ ಮುಖ್ಯ. ವಿದ್ಯಾರ್ಥಿಗಳೆಲ್ಲರೂ ಕ್ರೀಡಾ ಚೌಕಟ್ಟನ್ನು ಮೀರದೆ ಕ್ರೀಡೆಯಲ್ಲಿ ಪಾಲ್ಗೊಳ್ಳಬೇಕು. ಎಲ್ಲರಿಗೂ ಶುಭವಾಗಲಿ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಎಸ್.ಆರ್ ಸಮೂಹ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಯವರಾದ ಸಪ್ನಾ ಎನ್ ಶೆಟ್ಟಿ, ಎಸ್.ಆರ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಗೋಪಾಲಾಚಾರ್ಯ, ದೈಹಿಕ ಶಿಕ್ಷಣಾಧಿಕಾರಿಗಳು, ಹೆಬ್ರಿ ತಾಲೂಕಿನ ಎಲ್ಲಾ ದೈಹಿಕ ಶಿಕ್ಷಣ ಶಿಕ್ಷಕರು ಉಪಸಿತರಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.