



ಕುಂದಾಪುರ: ಪ್ರಸಕ್ತ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ಶೇ 100 ಫಲಿತಾಂಶದೊಂದಿಗೆ ಸಾಧನೆ ಮೆರೆದಿದ್ದು , ವಿಜ್ಞಾನ ವಿಭಾಗದಲ್ಲಿ ವಿದ್ಯಾರ್ಥಿನಿ ಸಂಜನಾ ಎನ್ ಹಾಗೂ ಮಾನ್ಯ 592 ಅಂಕಗಳನ್ನು ಪಡೆಯುವುದರ ಮೂಲಕ ರಾಜ್ಯಕ್ಕೆ 7 ನೇ ರ‍್ಯಾಂಕ್, ಸುಜಯಾ ಎಚ್ ಮತ್ತು ಅನಿರುದ್ದ್ ಶೇಟ್ 591 ಅಂಕಗಳೊಂದಿಗೆ 8 ನೇ ರ‍್ಯಾಂಕ್ , ಪೂಜಾ ಕಾರಂತ 590 ಅಂಕಗಳೊಂದಿಗೆ 9ನೇ ರ‍್ಯಾಂಕ್, ನಮ್ರತಾ 589 ಅಂಕಗಳೊಂದಿಗೆ 10ನೇ ರ‍್ಯಾಂಕ್ ಪಡೆದಿರುತ್ತಾರೆ.
ವಾಣಿಜ್ಯ ವಿಭಾಗದಲ್ಲಿ ಸಿಂಚನಾ 590 ಅಂಕಗಳೊಂದಿಗೆ 8ನೇ ರ‍್ಯಾಂಕ್, ವಿನಯ ಶ್ಯಾನುಭಾಗ್ 589 ಅಂಕಗಳೊಂದಿಗೆ 9 ನೇ ರ‍್ಯಾಂಕ್, ಶ್ರದ್ಧಾ 588 ಅಂಕಗಳೊಂದಿಗೆ 10 ನೇ ರ‍್ಯಾಂಕ್ ಪಡೆದು ರಾಜ್ಯದ ಅಗ್ರ ಸ್ಥಾನಿಯರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.
229 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಡಿಸ್ಟಿಂಕ್ಷನ್ ನಲ್ಲಿ 182 ವಿದ್ಯಾರ್ಥಿಗಳು, ಪ್ರಥಮ ಶ್ರೇಣಿಯಲ್ಲಿ 47 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.
ಕಂಪ್ಯೂಟರ್ ಸೈನ್ಸ ನಲ್ಲಿ 20, ಸಂಸ್ಕ್ರತದಲ್ಲಿ 19, ಗಣಿತಶಾಸ್ತ್ರ ದಲ್ಲಿ 16, ರಸಾಯನ ಶಾಸ್ತ್ರ ದಲ್ಲಿ 07, ಲೆಕ್ಕಶಾಸ್ತ್ರ ದಲ್ಲಿ 05 ,ಕನ್ನಡದಲ್ಲಿ 04, ಸಂಖ್ಯಾಶಾಸ್ತ್ರದಲ್ಲಿ 03, ಜೀವಶಾಸ್ತ್ರದಲ್ಲಿ 03, ಅರ್ಥಶಾಸ್ತ್ರ ದಲ್ಲಿ 02 ವಿದ್ಯಾರ್ಥಿಗಳು ವಿಷಯವಾರು ನೂರಕ್ಕೆ ನೂರು ಅಂಕ ಪಡೆದಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.