



ಕುಂದಾಪುರ: ಡಿ.11 ರಂದು ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ, ಹಿಂದಿ ಹಾಗೂ ಸಂಸ್ಕೃತ ಭಾಷೆಯನ್ನು ಅಧ್ಯಯನ ಮಾಡುವ ವಿದ್ಯಾರ್ಥಿಗಳಿಗೆ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಕನ್ನಡ ವಿಷಯದಲ್ಲಿ ತೆಂಕನಿಡಿಯೂರು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿಶ್ವನಾಥ ಕರಬ ಹಾಗೂ ಹಿಂದಿ ವಿಷಯದ ಬಗ್ಗೆ ಸಂಪನ್ಮೂಲ ವ್ಯಕ್ತಿ ಯಾಗಿ ಹಿರಿಯಡ್ಕ ಪದವಿ ಪೂರ್ವ ಕಾಲೇಜಿನ ಹಿಂದಿ ಉಪನ್ಯಾಸಕರಾದ ಡಾ. ಅನಂತ ರಾಮ್ ನಾಯಕ್, ಸಂಸ್ಕೃತ ವಿಷಯದ ಕುರಿತು ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಸಂಸ್ಕೃತ ಉಪನ್ಯಾಸಕಿ ಮಮತಾ ರೈ ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ನೀಡಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.