



2023-24ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಫಲಿತಾಂಶವು ಇಂದು ಪ್ರಕಟಗೊಂಡಿದ್ದು, ಉಡುಪಿ ಜಿಲ್ಲೆ ಪ್ರಥಮ, ದಕ್ಷಿಣ ಕನ್ನಡ ಜಿಲ್ಲೆ ದ್ವಿತೀಯ ಹಾಗೂ ಶಿವಮೊಗ್ಗ ತೃತೀಯ ಸ್ಥಾನ ಪಡೆದಿದೆ. ಯಾದಗಿರಿ ಜಿಲ್ಲೆ ಕೊನೆಯ ಸ್ಥಾನ ಪಡೆದುಕೊಂಡಿದೆ. ಈ ಬಾರಿ 631204 ಫಲಿತಾಂಶ ಸಾಧಿಸಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಜಿಲ್ಲಾವಾರು ಫಲಿತಾಂಶವನ್ನು ಪ್ರಕಟ ಗೊಳಿಸಿದೆ. ಉಡುಪಿ ಜಿಲ್ಲೆ(94%) ಪ್ರಥಮ ಸ್ಥಾನ ಪಡೆದಿದೆ. ಗ್ರಾಮೀಣ ಮತ್ತು ಸರ್ಕಾರಿ ಶಾಲಾ ಮಕ್ಕಳ ಉತ್ತನ ಸಾಧನೆ ಮಾಡಿದ್ದು, ಬಾಲಕರು – 287416 ಹಾಗೂ ಬಾಲಕಿಯರು – 423829 ಪಾಸ್ ಆಗಿದ್ದಾರೆ. ಕರ್ನಾಟಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‍ಸೈಟ್ karresults.nic.in ನಲ್ಲಿ ಎಸ್‍ಎಸ್‍ಎಲ್‍ಸಿ ಫಲಿತಾಂಶ ವೀಕ್ಷಿಸಬಹುದು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.