



ಬೆಂಗಳೂರು: ಮೇ 2ನೇ ವಾರದಲ್ಲಿ SSLC ಫಲಿತಾಂಶ ಪ್ರಕಟವಾಗಲಿದೆ
ಚುನಾವಣಾ ದಿನಾಂಕ ಹಾಗೂ ಫಲಿತಾಂಶದ ದಿನವನ್ನು ನೋಡಿಕೊಂಡು ಎಸ್‌ಎಸ್ಎಲ್‌ಸಿ ಪರೀಕ್ಷಾ ಫಲಿತಾಂಶ ಪ್ರಕಟಿಸಲಾಗುವುದು ಎಂದು ಮಂಡಳಿ ತಿಳಿಸಿದೆ.
ಏಪ್ರಿಲ್ 24 ರಿಂದ ಎಸ್‌ಎಸ್ಎಲ್‌ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಆರಂಭಗೊಳ್ಳಲಿದೆ. ಇದಕ್ಕಾಗಿ 73 ಸಾವಿರ ಶಿಕ್ಷಕರ ನಿಯೋಜನೆ ಮಾಡಲಾಗಿದೆ. ಮೌಲ್ಯಮಾಪನ ಕಾರ್ಯಕ್ಕೆ ಬೇಕಾದ ಎಲ್ಲ ಸಿದ್ಧತೆಗಳು ನಡೆದಿದೆ. ರಾಜ್ಯಾದ್ಯಂತ 236 ಕೇಂದ್ರಗಳಲ್ಲಿ 8.42 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ 50 ಲಕ್ಷಕ್ಕೂ ಹೆಚ್ಚು ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಯಲಿದೆ. ಮೇ ಎರಡನೇ ವಾರದಲ್ಲಿ ಫಲಿತಾಂಶ ಪ್ರಕಟಿಸಲಾಗುತ್ತದೆ. ಚುನಾವಣಾ ಮತದಾನ ಮತ್ತು ಚುನಾವಣಾ ಫಲಿತಾಂಶದ ದಿನಾಂಕವನ್ನು ನೋಡಿಕೊಂಡು ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಮಂಡಳಿ ಅಧ್ಯಕ್ಷ ರಾಮಚಂದ್ರನ್ ಮಾಹಿತಿ ನೀಡಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.