



ನವದೆಹಲಿ: ಜನವರಿ 3 ರಿಂದ 15-18 ವರ್ಷದ ಮಕ್ಕಳಿಗೆ ವ್ಯಾಕ್ಸಿನೇಷನ್ ಆರಂಭ
ಜನವರಿ 3 ರಿಂದ 15-18 ವರ್ಷದ ಮಕ್ಕಳಿಗೆ ವ್ಯಾಕ್ಸಿನೇಷನ್ ಆರಂಭವಾಗಲಿದೆ ಎಂದು ಪ್ರಧಾನಿ ಮೋದಿ ಘೋಷಣೆ ಮಾಡಿದ್ದಾರೆ.
ದೇಶದಲ್ಲಿ ಕೊರೊನಾ ರೂಪಾಂತರಿ ಒಮಿಕ್ರಾನ್ ಸೋಂಕಿನ ಅಟ್ಟಹಾಸ ಮೆರೆಯುತ್ತಿದ್ದು, ಇಂತಹ ಸಂದರ್ಭದಲ್ಲಿ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡುತ್ತಿದ್ದಾರೆ.ಭಾರತದ ದೊಡ್ಡ ಜನಸಂಖ್ಯೆಯಲ್ಲಿ ಬಹುತೇಕರಿಗೆ ಎರಡು ಡೋಸ್ ಲಸಿಕೆಗಳು ಸಿಕ್ಕಿವೆ. ವಿಶ್ವದಲ್ಲಿ ಅತಿಹೆಚ್ಚು ಜನರಿಗೆ ನಾವು ಲಸಿಕೆ ನೀಡಿದ್ದೇವೆ . ದೇಶದ ಎಲ್ಲ ನಾಗರಿಕರ ಸಾಮೂಹಿಕ ಪರಿಶ್ರಮದಿಂದ 100 ಕೋಟಿಗೂ ಹೆಚ್ಚು ಜನರಿಗೆ ಲಸಿಕೆ ನೀಡಲು ಸಾಧ್ಯವಾಗಿದೆ. ಈಗ ಎಚ್ಚರಿಕೆ ವಹಿಸುವುದು ಬಹಳ ಅಗತ್ಯವಾಗಿದೆ. ಎಲ್ಲರಿಗೂ ಗೊತ್ತಿದೆ ಕೊರೊನಾ ಹೋಗಿದೆ ಎಂಬುದು. ಕೊರೊನಾ ವಿರುದ್ಧ ಭಾರತ ಹೋರಾಟ ಮುಂದುವರೆಯುತ್ತಿದೆ. ಕೊರೊನಾ ಇನ್ನೂ ಕೂಡ ನಮ್ಮಿಂದ ದೂರ ಆಗಿಲ್ಲ. 12 ತಿಂಗಳಿನಿಂದ ವ್ಯಾಕ್ಸಿನೇಷನ್ ಆರಂಭವಾಗಿದೆ. ವ್ಯಾಕ್ಸಿನ್ ಪಡೆಯುವವರ ಸಂಖ್ಯೆ ಹೆಚ್ಚಾಗಿದೆಎಂದಿದ್ದಾರೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.