logo
WhatsApp Image 2026-04-02 at 14.46.04.jpeg
hindalco everlast.jpeg

ವಿಕಲಚೇತನರ ರಾಜ್ಯ ಪ್ರಶಸ್ತಿ: ಅರ್ಜಿ ಆಹ್ವಾನ

ಟ್ರೆಂಡಿಂಗ್
share whatsappshare facebookshare telegram
7 Oct 2023
post image

ಉಡುಪಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿಶ್ವ ವಿಕಲಚೇತನರ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಆಚರಿಸುವ ಸಂದರ್ಭದಲ್ಲಿ, ವಿಕಲಚೇತನರ ಕ್ಷೇತ್ರದಲ್ಲಿ ಸಾಧನೆಗೈದ ವ್ಯಕ್ತಿ, ಸಂಸ್ಥೆ ಮತ್ತು ವಿಶೇಷ ಶಾಲೆಗಳಲ್ಲಿ 15 ವರ್ಷಗಳಿಗೂ ಮೇಲ್ಪಟ್ಟ ಸೇವೆ ಸಲ್ಲಿಸುತ್ತಿರುವ ಹಾಗೂ ಸಲ್ಲಿಸಿರುವ ವಿಶೇಷ ಶಿಕ್ಷಕರಿಗೂ ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 25 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗಳು, ಸಿ ಬ್ಲಾಕ್, ತಳಮಹಡಿ, ಜಿಲ್ಲಾ ಪಂಚಾಯತ್ ವಿಭಾಗ, ಜಿಲ್ಲಾಧಿಕಾರಿ ಕಛೇರಿ, ರಜತಾದ್ರಿ, ಮಣಿಪಾಲ, ದೂರವಾಣಿ: 0820-2574810, 2574811 ಅಥವಾ ಇಲಾಖೆಯ ವೆಬ್‌ಸೈಟ್ www.dwdsc.kar.nic.inಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.