



ಕಾರ್ಕಳ:... ರಾಜ್ಯದಲ್ಲಿ ಪಶುವೈದ್ಯಾಧಿಕಾರಿಗಳ ಕೊರತೆಯೂ ಹೈನುಗಾರರ ನ್ನು ತೀವ್ರವಾಗಿ ಕಾಡುತ್ತಿದ್ದು.. ಅತಿಶೀಘ್ರವಾಗಿ 400 ಪಶುವೈದ್ಯಾಧಿಕಾರಿಗಳ ನೇಮಕ ಮತ್ತು ರಾಜ್ಯದಲ್ಲಿರುವ ಪಶು ಚಿಕಿತ್ಸಾ ಕೇಂದ್ರಗಳನ್ನು ಹಂತಹಂತವಾಗಿ ಮೇಲ್ದರ್ಜೆಗೇರಿಸುವ ಮತ್ತು ಹೊಸತಾಗಿ ನೂರು ಪಶು ಚಿಕಿತ್ಸಾ ಕೇಂದ್ರಗಳನ್ನು ಸ್ಥಾಪಿಸುವ ಬಜೆಟ್ ಪ್ರಸ್ತಾವನೆ.. ರಾಜ್ಯದ ಹೈನುಗಾರರ ಬಹುಕಾಲದ ಬೇಡಿಕೆಗೆ ಆಶಾಕಿರಣವಾಗಿ ಮೂಡಿಬಂದಿದೆ.
ರಾಜ್ಯದ ಸ್ಥಳೀಯ ಗೋತಳಿಗಳನ್ನು ಸಂರಕ್ಷಿಸಲು ಮತ್ತು ಅಭಿವೃದ್ಧಿಗಾಗಿ ಕೆಎಂಎಫ್ ಮೂಲಕ 2000 ಹೊಸ ಸ್ಥಳೀಯ ಗೋ ತಳಿಗಳ ವಿತರಣೆ ಮಾಡುವ ಕಾರ್ಯಕ್ರಮ ಒಂದು ಮಹತ್ವದ ನಡೆಯಾಗಿದೆ.
ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಬಸವರಾಜ ಬೊಮ್ಮಾಯಿ ಅವರ ವಿಶೇಷವಾದ ಕಾಳಜಿಯಿಂದ ಹಾವೇರಿಯಲ್ಲಿ ಈಗಾಗಲೇ ಪ್ರತ್ಯೇಕವಾದ ಹಾಲು ಒಕ್ಕೂಟ ಸ್ಥಾಪನಾ ಪ್ರಕ್ರಿಯೆ ಆರಂಭಗೊಂಡಿದ್ದು,
ಮುಂದಿನ ದಿನಗಳಲ್ಲಿ ಶಿವಮೊಗ್ಗ, ದಾವಣಗೆರೆ ,ಚಿತ್ರದುರ್ಗ ಮತ್ತು ಚಿಕ್ಕಮಗಳೂರಿಗೆ ಪ್ರತ್ಯೇಕ ಹಾಲು ಒಕ್ಕೂಟಗಳ ಸ್ಥಾಪನೆಯ ಘೋಷಣೆ ಹೈನೋದ್ಯಮದ ಬೆಳವಣಿಗೆಯ ದೃಷ್ಟಿಯಿಂದ ಮಹತ್ವದ ಹೆಜ್ಜೆಯಾಗಿದೆ ಎಂದು ಸಹಕಾರ ಭಾರತಿ ಕರ್ನಾಟಕ ರಾಜ್ಯ ಹಾಲು ಪ್ರಕೋಷ್ಠದ ಸಂಚಾಲಕರು ಹಾಗೂ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕರಾದ ಸಾಣೂರು ನರಸಿಂಹ ಕಾಮತ್ ರವರು ತಿಳಿಸಿದ್ದಾರೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.