



ಉಡುಪಿ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ (ಕೆ.ಎಸ್.ಡಿ.ಸಿ) ಬೆಂಗಳೂರು, ಇದರ ವತಿಯಿಂದ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗಾವಕಾಶವನ್ನು ನೀಡುವ ಸಲುವಾಗಿ ಫೆಬ್ರವರಿ 26 ಮತ್ತು 27 ರಂದು ರಾಜ್ಯ ಮಟ್ಟದ ಯುವ ಸಮೃದ್ಧಿ ಸಮ್ಮೇಳನ ಬೃಹತ್ ಉದ್ಯೋಗ ಮೇಳ-2024 ವನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗುತ್ತಿದೆ.
ಎಲ್ಲಾ ರೀತಿಯ ವಿದ್ಯಾರ್ಹತೆಯುಳ್ಳ ಉದ್ಯೋಗಾಕಾಂಕ್ಷಿಗಳು https://skillconnect.kaushalkar.com/ ಲಿಂಕ್‌ನಲ್ಲಿ ನೋಂದಣಿ ಮಾಡಿಕೊಳ್ಳುವ ಮೂಲಕ ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಮತ್ತು ಉಚಿತವಾಗಿ ನೋಂದಣಿ ಮಾಡಿಕೊಳ್ಳಲು ನಂ:201, ಬಿ ಬ್ಲಾಕ್, ಮೊದಲ ಮಹಡಿ, ರಜತಾದ್ರಿ, ಮಣಿಪಾಲದ ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿಗಳ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.