ಹುಬ್ಬಳ್ಳಿ :
ಕರ್ನಾಟಕ ರಾಜ್ಯ ಮಾಧ್ಯಮ ಅಕಾಡೆಮಿ
ಆಯೋಜಿಸಿದ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯಲ್ಲಿ
ಖ್ಯಾತ ಹಿರಿಯ ಛಾಯಾಗ್ರಾಹಕ ಸತೀಶ್ ಇರಾ
ಪ್ರಥಮ ಬಹುಮಾನ ಪಡೆದಿದ್ದಾರೆ.
ಉದಯವಾಣಿ ಮಂಗಳೂರು ವಿಭಾಗದ ಹಿರಿಯ ಛಾಯಾಗ್ರಾಹಕರಾಗಿ ಸೇವೆ ಸಲ್ಲಿಸುತಿದ್ದಾರೆ ಸತೀಶ್ ಇರಾ .
ಹುಬ್ಬಳ್ಳಿಯಲ್ಲಿ ಕರ್ನಾಟಕ ರಾಜ್ಯ ಮಾಧ್ಯಮ ಅಕಾಡೆಮಿವತಿಯಿಂದ ನಡೆದ ಸಮಾರಂಭದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಪುರಸ್ಕಾರ ಪ್ರದಾನ ಮಾಡಿದರು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆವಿ ಪ್ರಭಾಕರ್ , ಶಾಸಕ ಮಹೇಶ್ ಟೆಂಗಿನಕಾಯಿ,ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾ ಧ್ಯಕ್ಷ ಶಿವಾನಂದ ತಗಡೂರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.ಖ್ಯಾತ ಛಾಯಗ್ರಾಹಕ ಅಪುಲ್ ಆಳ್ವಾ ಇರಾ, ಅವರ ಗುರುಗಳಾಗಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.