



ಹೆಬ್ರಿ : ರಾಜ್ಯದ ಸರ್ವತೋಮುಖ ಅಭಿವೃದ್ಧಿಗಾಗಿ ರಾಷ್ಟ್ರೀಯ ಸೇವಾ ಯೋಜನೆಯ ಮೂಲಕ ಸಲ್ಲಿಸಿರುವ ಅನುಪಮ ಸೇವೆಯನ್ನು ಗುರುತಿಸಿ ಕರ್ನಾಟಕ ಸರ್ಕಾರವು ಹೆಬ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್. ಎಸ್. ಎಸ್ ಘಟಕಕ್ಕೆ 2019 -20 ನೇ ಸಾಲಿನ 'ರಾಷ್ಟ್ರೀಯ ಸೇವಾ ಯೋಜನೆಯ ಅತ್ಯುತ್ತಮ ಘಟಕ ರಾಜ್ಯ ಪ್ರಶಸ್ತಿ' ನೀಡಿ ಗೌರವಿಸಿದೆ. ಅದೇ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾಗಿರುವ ಬಾಲರಾಜ್ ಡಿ.ಬಿ ರವರಿಗೆ 2019 -20 ನೇ ಸಾಲಿನ 'ರಾಷ್ಟ್ರೀಯ ಸೇವಾಯೋಜನೆಯ ಅತ್ಯುತ್ತಮ ಕಾರ್ಯಕ್ರಮ ಅಧಿಕಾರಿಯಾಗಿ ರಾಜ್ಯ ಪ್ರಶಸ್ತಿ' ನೀಡಿ ಗೌರವಿಸಿದೆ.
ಬೆಂಗಳೂರಿನ ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆ ಯವನಿಕಾ ಸಭಾಭವನದಲ್ಲಿ ಮಂಗಳವಾರ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಾಂಶುಪಾಲರಾದ ಡಾ||ಪ್ರಸಾದ್ ರಾವ್ ಎಂ ಹಾಗೂ ಕಾರ್ಯಕ್ರಮ ಅಧಿಕಾರಿ ಬಾಲರಾಜ್ ಡಿ. ಬಿ ಇವರನ್ನು ಯುವ ಮತ್ತು ಕ್ರೀಡಾ ಸಬಲೀಕರಣ ಇಲಾಖೆಯ ಸಚಿವರಾದ ಶ್ರೀ ಡಾ|| ಕೆ.ಸಿ ನಾರಾಯಣ ಗೌಡ, ಉನ್ನತ ಶಿಕ್ಷಣ ಸಚಿವರಾದ ಶ್ರೀ ಡಾ.ಅಶ್ವಥ್ ನಾರಾಯಣ್ ಹಾಗೂ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ|| ಶಾಲಿನಿ ರಜನೀಶ್ ಪ್ರಶಸ್ತಿ ನೀಡಿ ಗೌರವಿಸಿದರು.
ಕಾಲೇಜಿನ ಎನ್.ಎಸ್.ಎಸ್ ಘಟಕವು 2017 -18 ರಿಂದ 2019 -20 ರವರೆಗೆ ಆಯೋಜಿಸಿದ್ದ ಮೂರು ವಾರ್ಷಿಕ ಶಿಬಿರಗಳು, ರಕ್ತದಾನ ಶಿಬಿರಗಳು, ದಂತ ಚಿಕಿತ್ಸಾ ಶಿಬಿರ, ಸ್ವಚ್ಛ ಭಾರತ್ ಸಮ್ಮರ್ ಇಂಟರ್ನ್ಶಿಪ್, ಬಾಲಕಾರ್ಮಿಕರ ಗಣತಿ, ವಿವಿಧ ಶಾಲೆಗಳಲ್ಲಿ ತಂಬಾಕು ದುಷ್ಪರಿಣಾಮ ಕಾರ್ಯಕ್ರಮ, ವರ್ಲಿ ಆರ್ಟ್ ಕಾರ್ಯಗಾರ ಹಾಗೂ ಶ್ರಮದಾನ ಮುಂತಾದ ಸಾಮಾಜಿಕ ಕಾರ್ಯಗಳನ್ನು ಗುರುತಿಸಿ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.