logo
WhatsApp Image 2026-04-02 at 14.46.04.jpeg
hindalco everlast.jpeg

ಇಂದಿನಿಂದ ರಾಜ್ಯಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭ

ಟ್ರೆಂಡಿಂಗ್
share whatsappshare facebookshare telegram
31 Mar 2023
post image

ಬೆಂಗಳೂರು: ಇಂದಿನಿಂದ (ಮಾ. 31) ಎಸ್ಎಸ್ಎಲ್ಸಿ ಪರೀಕ್ಷೆಗಳು ಆರಂಭಗೊಳ್ಳುತ್ತಿದ್ದು, ಏಪ್ರಿಲ್ 15ರವರೆಗೆ ನಡೆಯಲಿವೆ. ಈ ಹಿನ್ನೆಲೆಯಲ್ಲಿ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಜೆರಾಕ್ಸ್ ಅಂಗಡಿಗಳನ್ನು ಬಂದ್ ಮಾಡುವಂತೆ ಆದೇಶ ಹೊರಡಿಸಲಾಗಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೆಎಎಸ್ಆರ್ಟಿಸಿ ಹಾಗೂ ಬಿಎಂಟಿಸಿ ಬಸ್ಗಳಲ್ಲಿ ಉಚಿತ ಪ್ರಯಾಣದ ಅವಕಾಶ ನೀಡಲಾಗಿದೆ. ಪರೀಕ್ಷೆಯ ಪ್ರವೇಶ ಪತ್ರ ತೋರಿಸಿ ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ ಪ್ರಯಾಣಿಸಬಹುದಾಗಿದೆ.

ಈ ಬಾರಿ ಒಟ್ಟು 8,42,811 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ರಾಜ್ಯಾದ್ಯಂತ ಒಟ್ಟು 3,305 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ನಿಯಮಾವಳಿ ರೀತಿ ವೇಳಾಪಟ್ಟಿಯಂತೆ ಸಕಾಲಕ್ಕೆ ಪ್ರಶ್ನೆ ಪತ್ರಿಕೆಯನ್ನು ಪರೀಕ್ಷಾ ಕೇಂದ್ರಕ್ಕೆ ತಲುಪಿಸುವ ವ್ಯವಸ್ಥೆ ಮಾಡಿ ಕೊಳ್ಳಲಾಗಿದೆ. ಈ ವರ್ಷವೂ ಕರೊನಾ ಬ್ಯಾಚ್ ಎಂದು ಪರಿಗಣಿಸಿ ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕವನ್ನು ನೀಡಲಾಗುತ್ತದೆ ಎಂದು ತಿಳಿದು ಬಂದಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.