



ಹಲವು ಕಡೆ ಗುಡುಗು ಸಹಿತ ಬಿರುಗಾಳಿಯಿಂದ ಕೂಡಿದ ಮಳೆಯಾಗಲಿದೆ ಎಂಬ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮುಂದಿನ 2 ದಿನ ಗುಡುಗು ಸಹಿತ ಮಳೆಯಾಗಲಿದೆ. ಅಂದ ಹಾಗೆ ಪುತ್ತೂರು, ಕುಂದಾಪುರ, ಮಾಣಿ, ಕಾರ್ಕಳ, ಭಾಗಮಂಡಲ, ಕೋಟ, ಪಣಂಬೂರು, ಹುಣಸೂರು, ತುಮಕೂರಿನಲ್ಲಿ ಉತ್ತಮ ಮಳೆಯಾಗಿದೆ. ಕಲಬುರಗಿಯಲ್ಲಿ 41 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
ಇಂದು ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಮಳೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ. ಮೋಚಾ ಚಂಡಮಾರುತದ ಪ್ರಭಾವದಿಂದ ಮಳೆ ಹಲವು ಕಡೆ ಅಬ್ಬರಿಸುತ್ತಿದೆ. ಈ ಮೋಚಾ ಪ್ರಭಾವಕ್ಕೆ ಹಲವು ಕಡೆ ಬೆಟ್ಟಗುಡ್ಡಗಳು ಕುಸಿದಿದೆ. ಕೃಷಿಭೂಮಿಗಳು ಜಲಾವೃತ ಆದ ಘಟನೆಗಳು ನಡೆದಿದೆ. ಹವಾಮಾನ ಇಲಾಖೆ ಕರಾವಳಿ ಭಾಗದ ಮೀನುಗಾರರಿಗೆ ಎಚ್ಚರಿಕೆ ಸಂದೇಶವನ್ನು ನೀಡಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.