logo
WhatsApp Image 2026-04-02 at 14.46.04.jpeg
hindalco everlast.jpeg

ಡ್ರಗ್ಸ್ ಪೆಡ್ಲರ್ ಗಳ ಮೇಲೆ ಕಠಿಣ ಕ್ರಮ: ನಗರದಲ್ಲಿ ಎಸ್ಪಿ ಎಚ್ಚರಿಕೆ

ಟ್ರೆಂಡಿಂಗ್
share whatsappshare facebookshare telegram
23 Feb 2023
post image

ಮಣಿಪಾಲ: ಮಾಹೆ ವಿದ್ಯಾಸಂಸ್ಥೆಯ 42 ವಿದ್ಯಾರ್ಥಿಗಳ ಅಮಾನತು ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೆ ಮಚ್ಚೀಂದ್ರ ಇಂದು ನಗರದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ್ರು. ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ನಾವು ಹಲವಾರು ಡ್ರಗ್ಸ್ ಪ್ರಕರಣಗಳನ್ನು ಪತ್ತೆ ಮಾಡಿದ್ದು, ಈ ಕಾರ್ಯಚರಣೆಯಲ್ಲಿ ಅನೇಕ ಮಂದಿ ಪೆಡ್ಲರ್ ಗಳನ್ನ ವಶಕ್ಕೆ ತೆಗೆದುಕೊಂಡಿದ್ದೇವೆ. ಮಾಹೆಯ ಕೆಲ ವಿದ್ಯಾರ್ಥಿಗಳು ಕೂಡ ಪೆಡ್ಲರ್ ಗಳಾಗಿದ್ದು, ಅವರಿಂದ ಹೆಚ್ಚಿನ ಪ್ರಮಾಣದ ಮಾದಕ ದ್ರವ್ಯಗಳು ಪತ್ತೆಯಾಗಿತ್ತು. ಈ ಪ್ರಕರಣ ಬಗ್ಗೆ ನಾವು ವಿವಿಗೆ ಮಾಹಿತಿ ನೀಡಿದ್ದೆವು ಎಂದ್ರು. ಕಾಲೇಜು ಮತ್ತು ಹಾಸ್ಟೆಲ್ ಆವರಣದಲ್ಲಿ ಡ್ರಗ್ಸ್ ವ್ಯವಹಾರ ನಡೆದ ಬಗ್ಗೆ ವಿದ್ಯಾರ್ಥಿಗಳನ್ನು ಗುರುತಿಸಿ ಪಟ್ಟಿ ನೀಡಿದ್ದೇವೆ. ಟೆಸ್ಟಿಂಗ್ ಮೂಲಕ ಸಾಬೀತಾಗಿರುವ ಪ್ರಕರಣಗಳ ವಿವರ ಕೂಡ ವಿವಿಗೆ ನೀಡಿದ್ದೇವೆ. ಮಣಿಪಾಲ ವಿವಿ ಈ ವಿಚಾರಗಳಲ್ಲಿ ಸಕಾರಾತ್ಮಕವಾಗಿ ಸ್ಪಂದಿಸಿದೆ. ಇದೀಗ ಮಣಿಪಾಲ ವಿವಿ 42 ಮಂದಿಯನ್ನು ಅಮಾನತು ಮಾಡಿದೆ. ಈ ವಿಚಾರದಲ್ಲಿ ಪೊಲೀಸ್ ಇಲಾಖೆಯಾಗಲಿ ವಿವಿಯಾಗಲಿ ನಿರ್ಲಕ್ಷ ವಹಿಸುವುದಿಲ್ಲ ಅನ್ನೋ ಸಂದೇಶ ರವಾನೆಯಾಗಿದೆ ಎಂದು ಹೇಳಿದ್ರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.