



ಮಂಗಳೂರು: ಜತೆಯಾಗಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳನ್ನು ತಡೆದು ಹಲ್ಲೆ ನಡೆಸಿ
ಅವಾಚ್ಯ ಪದಗಳಿಂದ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಸುರತ್ಕಲ್ ಟೋಲ್ ಬೂತ್ ಬಳಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ದೇರಳಕಟ್ಟೆಯ ಕಾಲೇಜೊಂದರಲ್ಲಿ ಬೇರೆ ಬೇರೆ ಧರ್ಮದ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿನಿಯರು ಜತೆಯಾಗಿ ಪ್ರಯಾಣಿಸುತ್ತಿದ್ದರು. ಕಾರನ್ನು ತಡೆದ ಗುಂಪೊಂದು ಪೊಲೀಸರ ಸಮ್ಮುಖದಲ್ಲಿಯೇ, ಕಾರಿನಲ್ಲಿದ್ದವರಿಗೆ ಅವಾಚ್ಯ ಶಬ್ದಗಳಿಂದ ಬಯ್ಯುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ.
ಧರ್ಮದ ಹೆಸರಲ್ಲಿ ಕೆಲವು ಕಿಡಿಗೇಡಿಗಳು ಅಶಾಂತಿ ಸೃಷ್ಟಿಸಲು ಯತ್ನಿಸಿದ್ದು, ಘಟನೆಗೆ ಸಂಬಂಧಿಸಿದಂತೆ ಇಲ್ಲಿನ ಖಾಸಗಿ ಕಾಲೇಜಿನ ವಿದ್ಯಾರ್ಥಿಯೋರ್ವ ಕಿಡಿಗೇಡಿಗಳ ವಿರುದ್ಧ ದೂರು ದಾಖಲಿಸಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ 5 ಮಂದಿಯನ್ನು ಬಂಧಿಸಲಾಗಿದೆ. ಬಂಧಿತರನ್ನು ಪ್ರೀತಂ ಶೆಟ್ಟಿ, ಅರ್ಶಿತ್, ಶ್ರೀನಿವಾಸ್, ರಾಕೇಶ್ ಮತ್ತು ಅಭಿಷೇಕ್ ಎಂದು ಗುರುತಿಸಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.