



ಸುಬ್ರಹ್ಮಣ್ಯ: ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ರಸ್ತೆ ದಾಟುತ್ತಿದ್ದ ಕಡವೆಗೆ ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದದಲ್ಲಿ ನಡೆದಿದೆ. ಮೃತ ವ್ಯಕ್ತಿ ಕುಮಾರಸ್ವಾಮಿ ಶಾಲೆಯ ಹೆಡ್ ಕ್ಲರ್ಕ್ ರಾಮಚಂದ್ರ ಅರ್ಬಿತ್ತಾಯ ಎಂದು ಗುರುತಿಸಲಾಗಿದೆ.
ಸುಬ್ರಹ್ಮಣ್ಯದ ಗಾಂಗೇಯ ಕ್ರಿಕೆಟ್ ತಂಡದ ಆಟಗಾರರಾಗಿದ್ದ ಇವರು, ಪ್ರತಿನಿತ್ಯದಂತೆ ಕುಲ್ಕುಂದದ ಸೋಮಶೇಖರ್ ಎಂಬವರ ಮನೆಗೆ ಶಟಲ್ ಆಡಲು ಬೆಳಿಗ್ಗೆ 5:45ರ ಸಮಯ ತನ್ನ ಸಹೋದರನೊಂದಿಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದ್ದು, ರಾಮಚಂದ್ರ ಅವರ ತಲೆಗೆ ಗಂಭೀರ ಗಾಯಗಳಾಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಹಸವಾರ ಸಹೋದರನಿಗೆ ಅಲ್ಪ ಸ್ವಲ್ಪ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.