logo
WhatsApp Image 2026-04-02 at 14.46.04.jpeg
hindalco everlast.jpeg

ಮೋಟರೀಕೃತ ದೋಣಿಗಳಿಗೆ ಇಂಜಿನ್ ಖರೀದಿಗೆ ಸಹಾಯಧನ: ಅರ್ಜಿ ಆಹ್ವಾನ

ಟ್ರೆಂಡಿಂಗ್
share whatsappshare facebookshare telegram
5 Sept 2025
post image

ಉಡುಪಿ: ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಜ್ಯವಲಯ ಯೋಜನೆಯಡಿ ನೋಂದಣಿಯಾದ ಮೋಟರೀಕೃತ ದೋಣಿಗಳಲ್ಲಿ 15 ವರ್ಷ ಕಾಲಾವಧಿ ಮೀರಿದ ಹಳೆಯ ಇಂಜಿನ್‌ಗಳನ್ನು ನಿಷ್ಕ್ರಿಯಗೊಳಿಸಿ, ಹೊಸ ಇಂಜಿನ್ ಖರೀದಿಸಲು ಮತ್ತು ಹೊಸದಾಗಿ ಮೋಟರೀಕೃತ ನಾಡದೋಣಿ ನಿರ್ಮಿಸುವವರಿಗೆ ಇಂಜಿನ್ ಖರೀದಿಗೆ ಸಹಾಯಧನ ಸೌಲಭ್ಯ ನೀಡಲಾಗುತ್ತಿದ್ದು, ಯೋಜನೆಯ ಪ್ರಯೋಜನ ಪಡೆಯಲು ಜಿಲ್ಲೆಯ ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ದೂ.ಸಂಖ್ಯೆ: 0820-2530444, 2954444, ಸಹಾಯವಾಣಿ ಸಂಖ್ಯೆ: 8277200300 ಅಥವಾ ಉಡುಪಿ, ಕುಂದಾಪುರ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.