



ಉಡುಪಿ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಕ್ರಿಯಾ ಯೋಜನೆಯಡಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದ ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಂದ ಎಲೆಕ್ಟಾçನಿಕ್ ಹಾಗೂ ಡಿಜಿಟಲ್ ಮಾದ್ಯಮದಲ್ಲಿ ಉದ್ದಿಮೆ ಸ್ಥಾಪಿಸಲು ಘಟಕ ವೆಚ್ಚದ ಶೇ. 70 ರಷ್ಟು ಅಥವಾ 5 ಲಕ್ಷ ರೂ. ಸಹಾಯಧನ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಡಿಸೆಂಬರ್ ಅಂತ್ಯದ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಬಿ ಬ್ಲಾಕ್, ಕೊಠಡಿ ಸಂಖ್ಯೆ 307, ರಜತಾದ್ರಿ, ಮಣಿಪಾಲ ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.