logo
WhatsApp Image 2026-04-02 at 14.46.04.jpeg
hindalco everlast.jpeg

ಮತ್ಸ್ಯ ಸಂಪದ ಯೋಜನೆಯಡಿ ಸಹಾಯಧನ :ಮೀನುಗಾರರಿಂದ ಅರ್ಜಿ ಆಹ್ವಾನ

ಟ್ರೆಂಡಿಂಗ್
share whatsappshare facebookshare telegram
12 Feb 2025
post image

ಉಡುಪಿ,: ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಮತ್ಸö್ಯಸಂಪದ ಯೋಜನೆಯ-ಫಲಾನುಭವಿ ಆಧಾರಿತ ಯೋಜನೆಗಳನ್ನು ಅನುಷ್ಠಾನಗೊಳಿಸಲು ಘಟಕವಾರು/ವರ್ಗವಾರು ಗುರಿಗಳನ್ನು ನಿಗದಿಪಡಿಸಿದ್ದು, ಯೋಜನೆಯನ್ನು ಪಾರದರ್ಶಕವಾಗಿ ಅನಿಷ್ಠಾನಗೊಳಿಸಲು ಜಿಲ್ಲೆಯ ಅರ್ಹ ಮೀನುಗಾರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಘಟಕಗಳ ವಿವರ: ಪಚ್ಚಿಲೆ ಕೃಷಿ, ಸಾಂಪ್ರದಾಯಿಕ ಮತ್ತು ಮೋಟಾರೀಕೃತ ಮೀನುಗಾರಿಕಾ ದೋಣಿಗಳ ಮೀನುಗಾರರಿಗೆ ಸುರಕ್ಷತಾ ಕಿಟ್‌ಗಳನ್ನು ಒದಗಿಸಲು ಬೆಂಬಲ, ಸಾಂಪ್ರದಾಯಿಕ ಮೀನುಗಾರರಿಗೆ (ಬದಲಿ) ದೋಣಿ ಮತ್ತು ಬಲೆ ಒದಗಿಸುವುದು, ಐಸ್ ಪ್ಲಾö್ಯಂಟ್/ಕೋಲ್ಡ್ ಸ್ಟೋರೇಜ್ ನಿರ್ಮಾಣ, ೧೦ ಟನ್ ಸಾಮರ್ಥ್ಯದ ಐಸ್ ಪ್ಲಾö್ಯಂಟ್/ ಕೋಲ್ಡ್ ಸ್ಟೋರೇಜ್ ನಿರ್ಮಾಣ ಹಾಗೂ ಮನರಂಜನಾ ಮಿನುಗಾರಿಕೆ ಘಟಕಗಳಿಗೆ ಸಹಾಯಧನ ನೀಡಲಾಗುವುದು.

ಅರ್ಜಿ ಸಲ್ಲಿಸಲು ಫೆಬ್ರವರಿ 19 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಸಹಾಯಕ ನಿರ್ದೇಶಕರು, ಉಡುಪಿ, ಕುಂದಾಪುರ ಹಾಗೂ ಕಾರ್ಕಳ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.