



ನ್ಯೂಯಾರ್ಕ್:
ಮುನುಷ್ಯನಿಗೆ ಹಂದಿ ಹೃದಯವನ್ನು ಯಶಸ್ವಿಯಾಗಿ ಅಳವಡಿಸಲಾಗಿದೆ. ಹೃದಯ ಸಂಬಂಧಿ ರೋಗಿಗೆ ಹಂದಿಯ ಹೃದಯವನ್ನು ಅಮೆರಿಕದ ವೈದ್ಯರು ಯಶಸ್ವಿಯಾಗಿ ಅಳವಡಿಸಿದ್ದಾರೆ. ಈ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ.
ವೈದ್ಯಕೀಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಈ ಸಾಧನೆ ಮಾಡಲಾಗಿದ್ದು, ಅಂಗಾಂಗ ದಾನಗಳ ದೀರ್ಘಕಾಲದ ಕೊರತೆಯನ್ನು ಪರಿಹರಿಸಲು ಒಂದು ದಿನ ಸಹಾಯ ಮಾಡುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ.
ರೋಗಿ ಡೇವಿಡ್ ಬೆನೆಟ್ ಗೆ ಮಾನವ ಕಸಿ ಮಾಡಲು ಅಸಾಧ್ಯವಾದ ಹಿನ್ನೆಲೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಗಿತ್ತು. ಅವರು ಈಗ ಚೇತರಿಸಿಕೊಳ್ಳುತ್ತಿದ್ದಾರೆ ಮತ್ತು ಹೊಸ ಅಂಗವು ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದನ್ನು ನಿರ್ಧರಿಸಲು ಎಚ್ಚರಿಕೆಯಿಂದ ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಈ ಐತಿಹಾಸಿಕ ಶಸ್ತ್ರಚಿಕಿತ್ಸೆಯು ಶುಕ್ರವಾರ ನಡೆಯಿತು ಎಂದು ಮೇರಿಲ್ಯಾಂಡ್ ಮೆಡಿಕಲ್ ಸ್ಕೂಲ್ ವಿಶ್ವವಿದ್ಯಾಲಯವು ಸೋಮವಾರ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.