



ಕೆಲ ವಾರಗಳ ಹಿಂದೆಯಷ್ಟೇ ತಾವು ಮೂರು ಸಿನಿಮಾಗಳನ್ನು ಒಪ್ಪಿಕೊಂಡಿರುವ ಕುರಿತು ಕಿಚ್ಚ ಸುದೀಪ್ (Sudeep) ಬಹಿರಂಗ ಪಡಿಸಿದ್ದರು. ಮೂರು ಸಿನಿಮಾಗಳಲ್ಲಿ ಮೊದಲು ಯಾವುದು ಶುರುವಾಗಲಿದೆ ಎನ್ನುವ ಕುತೂಹಲ ಎಲ್ಲರದ್ದಾಗಿತ್ತು. ಇದೀಗ ಮತ್ತೆ ಸುದೀಪ್ ಟ್ವೀಟ್ ಮಾಡಿದ್ದು ಮೇ 22ರಂದು ಮೊದಲ ಸಿನಿಮಾದ ಪ್ರೊಮೋ (Promo) ಶೂಟ್ ಹಾಗೂ ಜೂನ್ 1 ರಂದು ಆ ಸಿನಿಮಾವನ್ನು ಲಾಂಚ್ ಮಾಡುವುದಾಗಿ ಬರೆದುಕೊಂಡಿದ್ದಾರೆ. ಮೂರರಲ್ಲಿ ಮೊದಲ ಶುರುವಾಗುವ ಸಿನಿಮಾ ಯಾವುದು ಎನ್ನುವ ಪ್ರಶ್ನೆ ಅವರ ಅಭಿಮಾನಿಗಳದ್ದು. ಪಬ್ಲಿಕ್ ಟಿವಿ ಡಿಜಿಟಲ್ ಗೆ ಸಿಕ್ಕಿರುವ ಮಾಹಿತಿ ಪ್ರಕಾರ ಮೊದಲು ಸಿನಿಮಾವಾಗಿ ‘ಬಿಲ್ಲ ರಂಗ ಬಾಷಾ’ (Billa Ranga Basha) ಮೂಡಿ ಬರಲಿದೆ. ಈ ಸಿನಿಮಾದ ಪ್ರೊಮೋ ಮೇ 22ರಿಂದ ಶುರುವಾಗಲಿದೆ. ಈ ಸಿನಿಮಾಗೆ ಅನೂಪ್ ಭಂಡಾರಿ ನಿರ್ದೇಶನ ಮಾಡಲಿದ್ದು, ವಿಕ್ರಾಂತ್ ರೋಣದ ನಂತರ ಈ ಜೋಡಿ ಮತ್ತೆ ಒಂದಾಗುತ್ತಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.