logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಬಂಗಾಳಿ ನಟಿ ಪಲ್ಲವಿ ಡೆ ಆತ್ಮಹತ್ಯೆ

ಟ್ರೆಂಡಿಂಗ್
share whatsappshare facebookshare telegram
15 May 2022
post image

ಕೋಲ್ಕತ್ತಾದ ಅಪಾರ್ಟ್​​ಮೆಂಟ್‌ನಲ್ಲಿಂದು ಬಂಗಾಳಿ ಕಿರುತೆರೆ ನಟಿ ಪಲ್ಲವಿ ಡೇ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪಲ್ಲವಿ ಏಪ್ರಿಲ್‌ನಲ್ಲಿ ದಕ್ಷಿಣ ಕೋಲ್ಕತ್ತಾದ ಗಾರ್ಫಾ ಪ್ರದೇಶದಲ್ಲಿ ಅಪಾರ್ಟ್​​ಮೆಂಟ್ ಅನ್ನು ಬಾಡಿಗೆಗೆ ಪಡೆದಿದ್ದು,ತಮ್ಮ ಗೆಳೆಯನ ಜೊತೆ ವಾಸವಿದ್ದರು. ಅಪಾರ್ಟ್‌ಮೆಂಟ್‌ನ ಕೇರ್‌ಟೇಕರ್, ಮಲಗುವ ಕೋಣೆಯಲ್ಲಿ ಅವರು ನೇಣು ಬಿಗಿದುಕೊಂಡಿದ್ದಾಳೆ ಎಂದು ತಿಳಿದ ತಕ್ಷಣ ಅವರ ಗೆಳೆಯ ನನ್ನನ್ನು ಜೋರಾಗಿ ಕೂಗಿ ಕರೆದರು. ನಂತರ ಇತರೆ ಮನೆಗೆಲಸದ ಸಿಬ್ಬಂದಿಯೊಂದಿಗೆ ಪಲ್ಲಬಿ ಅವರ ಶವವನ್ನು ಕೆಳಗೆ ಇಳಿಸಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದರು ಎಂದು ತಿಳಿಸಿದರು. 21 ವರ್ಷದ ನಟಿ ಕುಂಜಚ್ಚಯ, ರೇಷಮ್ ಜಾಪಿ, ಮೊನ್ ಮಾನೆ ನ ದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಇನ್ನೂ, ನಾವು ಎಲ್ಲಾ ಆಯಾಮಗಳಿಂದ ಪ್ರಕರಣವನ್ನು ಪರಿಶೀಲನೆ ನಡೆಸುತ್ತಿದ್ದೇವೆ. ಸದ್ಯ ನಾವು ಆಕೆಯ ಸಂಗಾತಿಯೊಂದಿಗೆ ಮಾತನಾಡುತ್ತಿದ್ದೇವೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರವೇ ಹೆಚ್ಚಿನ ವಿವರಗಳು ಲಭ್ಯವಾಗಲಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.