



ಬೆಂಗಳೂರು: ಕನ್ನಡದ ಕಿರುತೆರೆ ನಟಿ ಸೌಜನ್ಯ ಬೆಂಗಳೂರಿನ ದೊಡ್ಡಬೆಲೆ ಬಳಿಯ ತಮ್ಮ ನಿವಾಸದಲ್ಲೇ ಸೌಜನ್ಯ (25) ಆತ್ಮಹತ್ಯೆಗೆ ಶರಣಾಗಿದ್ದಾರೆ.ಆರೋಗ್ಯ ಸಮಸ್ಯೆಯಿಂದಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಸೌಜನ್ಯ ಡೆತ್ ನೋಟ್ ನಲ್ಲಿ ಬರೆದಿಟ್ಟಿದ್ದಾರೆ ಎನ್ನಲಾಗಿದೆ. ಸೌಜನ್ಯ ಕೊಡಗು ಜಿಲ್ಲೆ ಕುಶಾಲನಗರ ಮೂಲದವರಾಗಿದ್ದು, ಹಲವು ಧಾರಾವಾಹಿಗಳಲ್ಲಿ ಅಭಿನಯಿಸಿದ್ದರು. ಚೌಕಟ್ಟು ಹಾಗೂ ಫನ್ ಚಿತ್ರದಲ್ಲಿ ಕೂಡ ಸೌಜನ್ಯ ಅಭಿನಯಿಸಿದ್ದಾರೆ.ಬೆಂಗಳೂರಿನ ದೊಡ್ಡಬೆಲೆ ಬಳಿ ಅಪಾರ್ಟ್ ಮೆಂಟ್ ನಲ್ಲಿ ಗೆಳೆಯನ ಜೊತೆ ವಾಸವಾಗಿದ್ದರು. ಇಂದು ಬೆಳಿಗ್ಗೆ ಗೆಳೆಯನನ್ನು ತಿಂಡಿ ತರುವಂತೆ ಹೇಳಿ ಕಳುಹಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಕುಂಬಳಗೋಡು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.