



ಸುಳ್ಯ: ಇಲ್ಲಿನ ಅಮರ ಮುಡ್ನೂರು ಹಾಗೂ ಅಮರ ಪಡ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಗ್ರಾಮಸ್ಥರ ಅಹವಾಲು ಆಲಿಸಲು ಹಾಗೂ ಕೆಲವೊಂದು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಿಕೊಡಲು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಶನಿವಾರ ಕುಕ್ಕುಜಡ್ಕದ ಕೃಷಿ ಪತ್ತಿನ ಪ್ರಾಥಮಿಕ ಸಹಕಾರಿ ಸಂಘದ ಅಮರ ಸಹಕಾರ ಸಭಾಭವನ ಗ್ರಾಮ ವಾಸ್ತವ್ಯ ಕೈಗೊಂಡರು.
ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪುತ್ತೂರು ಸಹಾಯಕ ಆಯುಕ್ತ ಯತೀಶ್ ಉಳ್ಳಾಲ್, ತಹಶೀಲ್ದಾರ್
ಅನಿತಾಲಕ್ಷ್ಮಿ, ಉಪ ತಹಶೀಲ್ದಾರ್ ಚಂದ್ರಕಾಂತ್, ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿ ಆಕಾಶ್, ವಿವಿಧ ಇಲಾಖೆಗಳ ಅಧಿಕಾರಿಗಳು, ಸ್ಥಳೀಯ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪದ್ಮಪ್ರಿಯಾ ಮೇಲ್ತೋಟ, ಉಪಾಧ್ಯಕ್ಷರು, ಸದಸ್ಯ ಹಾಜರಿದ್ದರು..
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.