logo
WhatsApp Image 2026-04-02 at 14.46.04.jpeg
hindalco everlast.jpeg

ಸುಳ್ಯ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ.

ಟ್ರೆಂಡಿಂಗ್
share whatsappshare facebookshare telegram
5 Jun 2024
post image

ಸುಳ್ಯ: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರುಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಎನ್​ಐಎ ಅಧಿಕಾರಿಗಳು ಬಂಧಿಸಿದ್ದಾರೆ. ರಿಯಾಜ್ ಯೂಸಫ್ ಹಾರಳ್ಳಿ ಬಂಧಿತ ಆರೋಪಿ. ಇತ ವಿದೇಶಕ್ಕೆ ಪರಾರಿಯಾಗುಲು ಯತ್ನಿಸುತ್ತಿದ್ದಾಗ ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೆರೆ ಹಿಡಿಯಲಾಗಿದೆ.

ಈ ಮೂಲಕ ಬಂಧಿತ ಆರೋಪಿಗಳು ಸಂಖ್ಯೆ 19 ಕ್ಕೆ ಏರಿಕೆಯಾಗಿದೆ. ಒಂದು ತಿಂಗಳ ಹಿಂದೆ‌ಯಷ್ಟೇ ಸಕಲೇಶಪುರದಲ್ಲಿ ಮುಸ್ತಾಫಾ ಪೈಚಾರ್​ನನ್ನು ಬಂಧಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರವೀಣ್ ನೆಟ್ಟಾರು ಹತ್ಯೆ ಕೇಸ್​ನ ನಾಲ್ಕನೇ ಆರೋಪಿಯನ್ನು ಕಳೆದ ಮೇ.10 ರಂದು ಹಾಸನ ಜಿಲ್ಲೆಯ ಸಕಲೇಶಪುರದ​ ಆನೆಮಹಲ್ ಬಳಿ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಬಂಧಿಸಿದ್ದರು. ಹೌದು, ಸುಳ್ಯದ ಶಾಂತಿನಗರ ನಿವಾಸಿ ಮುಸ್ತಾಫ ಪೈಚಾರ್ (43) ನನ್ನು ಅರೆಸ್ಟ್ ಮಾಡಿ ಅಧಿಕಾರಿಗಳು ಬೆಂಗಳೂರು ಎನ್​ಐಎ ಕಚೇರಿಗೆ ಕರೆದೊಯ್ದಿದ್ದರು. ಇದರ ಬೆನ್ನಲ್ಲೇ ಇದೀಗ ಮತ್ತೋರ್ವನನ್ನು ಬಂಧಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ 2022ರ ಜುಲೈ 26 ರಂದು ಬಿಜೆಪಿ ಯುವ ಮುಂಖಡ ಪ್ರವೀಣ್ ನೆಟ್ಟಾರು ಎಂಬಾತನನ್ನು, ಆತನ ಕೋಳಿ ಅಂಗಡಿ ಬಳಿಯೇ ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ನಂತರ ಗಾಯಗೊಂಡಿದ್ದ ಪ್ರವೀಣ್​ನನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.