logo
WhatsApp Image 2026-04-02 at 14.46.04.jpeg
hindalco everlast.jpeg

ಸುಳ್ಯ: ಬಾಲಕಿಗೆ ಲೈಂಗಿಕ ಕಿರುಕುಳ - ಆರೋಪಿ ಪರಾರಿ

ಟ್ರೆಂಡಿಂಗ್
share whatsappshare facebookshare telegram
2 Apr 2024
post image

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಸಮೀಪ ಯುವಕನೋರ್ವ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ನಾಪತ್ತೆಯಾದ ಘಟನೆ ಸುಳ್ಯದ ಗಾಂಧಿನಗರ ಎಂಬಲ್ಲಿ ಸಂಭವಿಸಿದೆ.

ಈ ಪ್ರದೇಶದ ಬಾಡಿಗೆ ಮನೆಯೊಂದರಲ್ಲಿ ವಾಸ ಮಾಡುತ್ತಿದ್ದ ಉತ್ತರ ಕರ್ನಾಟಕ ಮೂಲದ ಕಾರ್ಮಿಕ ಕುಟುಂಬದ ಬಾಲಕಿಗೆ ಅದೇ ಭಾಗದ ಯುವಕನೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆ. ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದ ವೇಳೆ ಆಕೆಯ ಮನೆಗೆ ತೆರಳಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ.

ಬಳಿಕ ಈ ವಿ‍ಷಯ ಮನೆಯವರಿಗೆ ತಿಳಿಯುತ್ತಿದ್ದಂತೆ ಯುವಕ ನಾಪತ್ತೆಯಾಗಿದ್ದಾನೆ. ಇನ್ನು ಈ ಬಗ್ಗೆ ಸುಳ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.