logo
WhatsApp Image 2026-04-02 at 14.46.04.jpeg
hindalco everlast.jpeg

ಸುಳ್ಯ: ಮಣ್ಣು ಕುಸಿದು ಮೂವರು ಕಾರ್ಮಿಕರು ದುರ್ಮರಣ

ಟ್ರೆಂಡಿಂಗ್
share whatsappshare facebookshare telegram
25 Mar 2023
post image

ಸುಳ್ಯ: ನಿರ್ಮಾಣ ಕಾಮಗಾರಿ ವೇಳೆ ಮಣ್ಣು ಕುಸಿದು ಮೂವರು ಕಾರ್ಮಿಕರು ಮಣ್ಣಿನಡಿ ಸಿಲುಕಿ ಮೃತಪಟ್ಟ ಘಟನೆ ಸುಳ್ಯದಲ್ಲಿ ಮಾ. 25 ರಂದು ನಡೆದಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಿರೇಗೊಡ್ಡೆಟ್ಟಿ ಸೋಮಶೇಖರ್ ರೆಡ್ಡಿ (45), ಅವರ ಪತ್ನಿ ಶಾಂತಕ್ಕ (35), ಇನ್ನೊರ್ವ ಯುವಕ ( ಓರ್ವರ ಹೆಸರು ತಿಳಿದುಬರಬೇಕಷ್ಟೆ) ಮೃತರು ಎಂದು ತಿಳಿದುಬಂದಿದೆ.

ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ಸುಳ್ಯದ ಪೇಟೆ ಸಮೀಪದ ಆಲೆಟ್ಟಿ ರಸ್ತೆಯ ಗುರುಂಪು ಎಂಬಲ್ಲಿ ಘಟನೆ ನಡೆದಿದೆ. ಖಾಸಗಿ ವ್ಯಕ್ತಿಯೋರ್ವರು ತಮ್ಮ ಮನೆ ಹಿಂಭಾಗದಲ್ಲಿ ತಡೆಗೋಡೆ ನಿರ್ಮಾಣಕ್ಕೆ ಪಿಲ್ಲರ್ ಕಾಮಗಾರಿ ನಡೆಸುವ ನಿರ್ಮಾಣ ಕಾಮಗಾರಿ ನಡೆಸುತ್ತಿದ್ದರು. ಕಾರ್ಮಿಕರು ಇಂದು ಕೆಲ ನಿರ್ವಹಿಸುವ ವೇಳೆ ಒಮ್ಮೆಲೇ ಮಣ್ಣು ಕುಸಿದು ಬಿದ್ದಿದೆ. ಘಟನೆ ವೇಳೆ ಏಳು ಮಂದಿ ಸ್ಥಳದಲ್ಲಿದ್ದು ನಾಲ್ವರು ಓಡಿ ಪಾರಾಗಿದ್ದು, ಮೂವರು ಮಣ್ಣಿನಡಿ ಸಿಲುಕಿದ್ದರು. ಘಟನೆ ನಡೆದ ಕೂಡಲೇ ಜೆಸಿಬಿ ಮೂಲಕ ಮಣ್ಣಿನಡಿ ಸಿಲುಕಿದ್ದವರ ಹೊರತೆಗೆಯಲು ಕಾರ್ಯಾಚರಣೆ ಆರಂಭಿಸಲಾಗಿದ್ದು, ಮಣ್ಣಿನಡಿ ಸಿಲುಕಿದ್ದವರನ್ನು ಹೊರತಗೆಯುವ ವೇಳೆಗೆ ಮೂವರು ಅವರು ಮೃತಪಟ್ಟಿದ್ದರು ಎನ್ನಲಾಗಿದೆ. ಸತತ ಒಂದುವರೆ ಗಂಟೆಗೂ ಅಧಿಕ ಸಮಯ ಕಾರ್ಯಾಚರಣೆ ನಡೆಸಲಾಯಿತು.

ಘಟನಾ ಸ್ಥಳಕ್ಕೆ ಸಚಿವ ಎಸ್.ಅಂಗಾರ, ತಹಶೀಲ್ದಾರ್ ಮಂಜುನಾಥ್, ತಾ.ಪಂ‌ ಇಒ ಭವಾನಿಶಂಕರ್, ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ಮುಖ್ಯಾಧಿಕಾರಿ ಸುಧಾಕರ್, ಸುಳ್ಯ ಪೊಲೀಸರು, ಅಗ್ನಿಶಾಮಕ ದಳದವರು ಮತ್ತಿತರರು ಭೇಟಿ ನೀಡಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.