logo
WhatsApp Image 2026-10-07 at 11.10.42 PM - Copy.jpeg
WhatsApp Image 2026-04-02 at 14.46.04.jpeg

ಹೇಮಂತ್ ಪೂಜಾರಿಗೆ ಉದ್ಯಮಿಗಳ ಮೊಬೈಲ್ ನಂಬರ್ ಪೂರೈಕೆ: ಉಡುಪಿಯಲ್ಲಿ ಆರೋಪಿ ಬಂಧನ

ಟ್ರೆಂಡಿಂಗ್
share whatsappshare facebookshare telegram
4 Nov 2026
post image

ಉಡುಪಿ: ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಉಡುಪಿ ಜಿಲ್ಲೆಯ ಉದ್ಯಮಿಗಳಿಗೆ ಅಂತರರಾಷ್ಟ್ರೀಯ ದೂರವಾಣಿ ಸಂಖ್ಯೆಗಳಿಂದ ಕರೆ ಮಾಡಿ ಕೋಟ್ಯಂತರ ರೂಪಾಯಿ ಸುಲಿಗೆಗೆ ಬೇಡಿಕೆ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿಗಳ ಮೊಬೈಲ್ ಸಂಖ್ಯೆಗಳನ್ನು ಪೂರೈಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಸಾಂತೂರು ಗ್ರಾಮದ ಹರೀಶ್ ಪೂಜಾರಿ (45) ಎಂದು ಗುರುತಿಸಲಾಗಿದೆ.

ಮುದರಂಗಡಿ ಡೇವಿಡ್ ಡಿಸೋಜಾ ಅವರ ಕೊಲೆಯ ಬಳಿಕ ಹೇಮಂತ್ ಪೂಜಾರಿ ಉಡುಪಿ ಜಿಲ್ಲೆಯ ಪಡುಬಿದ್ರಿ, ಮಣಿಪಾಲ, ಕಾಪು ಹಾಗೂ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಉದ್ಯಮ ನಡೆಸುತ್ತಿರುವ ಶ್ರೀಮಂತ ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡಿದ್ದ ಎನ್ನಲಾಗಿದೆ. ಅಂತರರಾಷ್ಟ್ರೀಯ ದೂರವಾಣಿ ಸಂಖ್ಯೆಗಳಿಂದ ಕರೆ ಮಾಡಿ ಕೋಟ್ಯಂತರ ರೂಪಾಯಿ ಹಣಕ್ಕೆ ಬೇಡಿಕೆ ಇಡುತ್ತಿದ್ದ. ಹಣ ನೀಡದಿದ್ದರೆ ಶಿರ್ವದಲ್ಲಿ ಕೊಲೆಯಾದ ಡೇವಿಡ್ ಡಿಸೋಜಾ ಅವರ ರೀತಿಯಲ್ಲೇ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕುತ್ತಿದ್ದ. ಈ ಸಂಬಂಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು ಎಂಟು ಪ್ರಕರಣಗಳು ದಾಖಲಾಗಿದ್ದವು.

ಈ ಪೈಕಿ ಶಿರ್ವ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ತನಿಖೆ ಕೈಗೊಂಡ ಪೊಲೀಸರು, ಹೇಮಂತ್ ಪೂಜಾರಿಗೆ ಉದ್ಯಮಿಗಳ ಮೊಬೈಲ್ ಸಂಖ್ಯೆಗಳನ್ನು ಒದಗಿಸುತ್ತಿದ್ದ ಹರೀಶ್ ಪೂಜಾರಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು.

ವಿಚಾರಣೆ ವೇಳೆ ಪ್ರಕರಣದ ದೂರುದಾರರ ಮೊಬೈಲ್ ಸಂಖ್ಯೆಯನ್ನು ಹೇಮಂತ್ ಪೂಜಾರಿಗೆ ನೀಡಿ, ಸುಲಿಗೆ ಬೆದರಿಕೆ ಕೃತ್ಯಕ್ಕೆ ಸಹಕರಿಸಿರುವುದಾಗಿ ಹರೀಶ್ ಪೂಜಾರಿ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ನವೆಂಬರ್ 2ರಂದು ಆತನನ್ನು ಬಂಧಿಸಿದ ಪೊಲೀಸರು, ಕೃತ್ಯಕ್ಕೆ ಬಳಸಿದ್ದ ಎರಡು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

WhatsApp Image 2026-10-20 at 7.47.33 PM.jpeg
WhatsApp Image 2026-10-20 at 7.47.33 PM (1) - Copy.jpeg
WhatsApp Image 2026-10-20 at 6.05.03 PM.jpeg
WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.