



ನವದೆಹಲಿ: ದೇಶಾದ್ಯಂತ ವೈದ್ಯಕೀಯ ಸ್ನಾತಕೋತ್ತರ ಕೋರ್ಸ್ ಗಳ ಪ್ರವೇಶಕ್ಕಾಗಿ ನಡೆದಿದ್ದ ನೀಟ್ ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಲು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಗೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.
ನೀಟ್ ಪರೀಕ್ಷಾ ಫಲಿತಾಂಶವನ್ನು ಎನ್ ಟಿ ಎ ಘೋಷಿಸದಂತೆ ಮತ್ತು ಇಬ್ಬರು ಪರೀಕ್ಷಾರ್ಥಿಗಳಿಗೆ ಮರು ಪರೀಕ್ಷೆ ನಡೆಸುವಂತೆ ಬಾಂಬೆ ಹೈಕೋರ್ಟ್ ಆದೇಶ ನೀಡಿತ್ತು. ಈ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು, ನೀಟ್ ಫಲಿತಾಂಶವನ್ನು ಘೋಷಿಸುವಂತೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಗೆ ತಿಳಿಸಿದೆ.
ಇಬ್ಬರು ಪರೀಕ್ಷಾರ್ಥಿಗಳ ಪ್ರಶ್ನೆ ಪತ್ರಿಕೆಗಳು ಮತ್ತು ಒಎಂಆರ್ ಪ್ರತಿಗಳು ಪರೀಕ್ಷೆಗೂ ಮುನ್ನಾ ಪರೀಕ್ಷಾ ಕೇಂದ್ರದಲ್ಲಿ ಬೆರೆತು ಹೋಗಿದ್ದವು. ಹೀಗಾಗಿ ಅವರಿಗೆ ಮತ್ತೊಮ್ಮೆ ಅವಕಾಶ ಕೊಡಬೇಕು. ಈ ಇಬ್ಬರ ಪರೀಕ್ಷಾ ಫಲಿತಾಂಶವನ್ನು ಕೂಡ ಸೆಪ್ಟೆಂಬರ್ 12ರಂದು ನಡೆಸಿದ ಪರೀಕ್ಷೆಯ ಫಲಿತಾಂಶದ ಜತೆಗೇ ಪ್ರಕಟಿಸಬೇಕು ಎಂದು ಹೈಕೋರ್ಟ್ ಆದೇಶಿಸಿತ್ತು.
ಈ ಹಿನ್ನೆಲೆಯಲ್ಲಿ ಎನ್ ಟಿ ಎ ಫಲಿತಾಂಶ ಘೋಷಿಸದಂತೆ ಕೋರ್ಟ್ ತಡೆ ನೀಡಿತ್ತು. ಇದೀಗ ಸುಪ್ರೀಂ ಕೋರ್ಟ್ ನೀಟ್ ಫಲಿತಾಂಶ ಘೋಷಣೆಗೆ ಅನುಮತಿ ನೀಡಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.