



ಮಂಗಳೂರು: ಸುರತ್ಕಲ್ ಎನ್‌ಐಟಿಕೆಯಲ್ಲಿ ಬಿಇ ಎಲೆಕ್ಟ್ರಿಕಲ್ ಅಂಡ್ ಎಲೆಕ್ಟ್ರಾನಿಕ್ಸ್ ದ್ವಿತೀಯ ವರ್ಷದ ಎಂಜಿನಿಯರಿಂಗ್ ವ್ಯಾಸಂಗ್ ಮಾಡುತ್ತಿದ್ದ ವಿದ್ಯಾರ್ಥಿಯೋರ್ವ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ನಡೆದಿದೆ. ಬಿಹಾರ ರಾಜ್ಯದ ಪಾಟ್ನಾ ನಗರದ ಸೌರವ್ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಸ್ಥಳದಲ್ಲಿ ಡೆತ್ ನೋಟ್ ಸಿಕ್ಕಿದ್ದು, ಅದರಲ್ಲಿ 'ಶೈಕ್ಷಣಿಕ ಸಾಲ ಪಡೆದು ಬಿಇ ವ್ಯಾಸಂಗ ಮಾಡುತ್ತಿದ್ದು, ಓದು ಮುಗಿಯುವವರೆಗೆ ಸಾಲ ಹೆಚ್ಚಾಗುವ ಭಯ ಹಾಗೂ ಉದ್ಯೋಗ ಸಿಗದೇ ಇದ್ದರೆ ಹೇಗೆ ಎಂಬ ಆತಂಕದಿಂದ ಆತ್ಮಹತ್ಯೆ ಮಾಡಿಕೊಂಡಿದ್ದೇನೆ. ನನ್ನ ಸಾವಿಗೆ ಯಾರೂ ಕೂಡ ಕಾರಣರಲ್ಲ ಎಂದು ಉಲ್ಲೇಖಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದ್ದಾರೆ. ಸೌರವ್ ಪೋಷಕರು ತುಂಬಾ ಬಡವರಾಗಿದ್ದು, ಅವರು ಮಂಗಳೂರಿಗೆ ಬರುವ ಸ್ಥಿತಿಯಲ್ಲಿ ಇಲ್ಲದ ಕಾರಣ ಇಲ್ಲಿಯೇ ಅಂತ್ಯಸಂಸ್ಕಾರ ನೆರವೇರಿಸಲು ಕೋರಿದ್ದಾರೆ. ಆದರೆ, ಕಾಲೇಜಿನ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಮೃತ ದೇಹವನ್ನು ಪಾಟ್ನಾಗೆ ಕಳುಹಿಸಿಕೊಡುವ ವ್ಯವಸ್ಥೆ ಮಾಡಿದ್ದಾರೆ. ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.