



ಮಂಗಳೂರು: ಮಂಗಳೂರು ಸುರತ್ಕಲ್ ಬಳಿಯ ಮುಕ್ಕ ಹೆದ್ದಾರಿಯಲ್ಲಿ ರಸ್ತೆ ಬದಿ ತಂದೆಯೊಂದಿಗೆ ನಡೆದುಕೊಂಡು ಹೋಗುತ್ತಿದ್ದ ಶಾಲಾ ಬಾಲಕಿಯ ಮೇಲೆ ಲಾರಿ ಹರಿದು ಬಾಲಕಿ ದಾರುಣವಾಗಿ ಮೃತಪಟ್ಟ ಘಟನೆ ಸಂಭವಿಸಿದೆ.
ಸಾವನ್ನಪ್ಪಿದ ಬಾಲಕಿ ಮುಕ್ಕ ಮಿತ್ರಪಟ್ಟದ ನಿವಾಸಿ ಮಾನ್ವಿ (12) ಎಂದು ತಿಳಿಯಲಾಗಿದೆ
ಉತ್ತರ ಕರ್ನಾಟಕ ಮೂಲದ ವ್ಯಕ್ತಿ ಚಲಾಯಿಸುತ್ತಿದ್ದ ಈ ಲಾರಿ ತಂದೆ, ಮಗಳು ಸ್ಕೂಟಿಯಲ್ಲಿ ಮುಕ್ಕದ ಮನೆಗೆ ಹೋಗುತ್ತಿದ್ದಾಗ ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಈ ವೇಳೆ ಲಾರಿ ಬಾಲಕಿಯ ಮೇಲೆಯೇ ಹರಿದು ಆಕೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ. ಆಕೆಯ ತಂದೆ ಇನ್ನೊಂದು ಬದಿಗೆ ಬಿದ್ದಿದ್ದರಿಂದ ಬಚಾವಾಗಿದ್ದಾರೆ. ಬಾಲಕಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ ಎನ್ನಲಾಗಿದೆ. ಮಾನ್ವಿ ಎನ್‌ಐಟಿಕೆ ಶಾಲೆಯಲ್ಲಿ ಏಳನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು. ಆಕೆ ಶಾಲೆ ಬಿಟ್ಟು ತಂದೆಯೊಂದಿಗೆ ಮನೆಯ ಕಡೆಗೆ ನಡೆದುಕೊಂಡು ಬರುತ್ತಿದ್ದಳು. ಈ ವೇಳೆ ಅಪಘಾತ ನಡೆದಿದೆ. ತಕ್ಷಣ ಸ್ಥಳೀಯರು ಸೇರಿ ಲಾರಿ ಚಾಲಕನಿಗೆ ಧರ್ಮದೇಟು ನೀಡಿದ್ದಾರೆ. ಲಾರಿ ಚಾಲಕ ಮದ್ಯದ ಮತ್ತಿನಲ್ಲಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ.
ಸುರತ್ಕಲ್ ಟ್ರಾಫಿಕ್ ಪೊಲೀಸರು ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರೊಂದಿಗೆ ಸ್ಥಳೀಯರು ಜಟಾಪಟಿ ನಡೆಸಿದ್ದಾರೆ. ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.