logo
WhatsApp Image 2026-04-02 at 14.46.04.jpeg
hindalco everlast.jpeg

ಸುರತ್ಕಲ್ ಟೋಲ್ ಸುಲಿಗೆಯ ಹಣ ಬಿಜೆಪಿ ಬೆಂಬಲಿತ ಕ್ರಿಮಿನಲ್ ಕೂಟಗಳ ಪಾಲು: ಅಭಯ ಚಂದ್ರ ಜೈನ್ ಆರೋಪ

ಟ್ರೆಂಡಿಂಗ್
share whatsappshare facebookshare telegram
10 Oct 2022
post image

ಮಂಗಳೂರು: ಸರಕಾರದ ತೀರ್ಮಾನದ ಹೊರತಾಗಿಯೂ ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವುಗೊಳಿಸದೆ ಇರುವುದರ ಹಿಂದೆ ಬಿಜೆಪಿಯ ಶಾಸಕ, ಸಂಸದರು ಇದ್ದಾರೆ. ಅಲ್ಲಿ ಜನರಿಂದ ಸುಲಿಗೆ ಮಾಡುವ ಹಣ ಬಿಜೆಪಿ ಬೆಂಬಲಿತ ಕ್ರಿಮಿನಲ್ ಗಳ, ಗೂಂಡಾಗಳ ಪಾಲಾಗುತ್ತದೆ. ಕ್ರಿಮಿನಲ್ ಗೂಂಡಾಗಳನ್ನು ಸಾಕಲೆಂದೇ ಬಿಜೆಪಿ ನಾಯಕರು ಸುರತ್ಕಲ್ ಟೋಲ್ ಗೇಟ್ ತೆರವಿಗೆ ಅಡ್ಡಿಯಾಗಿದ್ದಾರೆ. ಈ ಅಕ್ರಮದಲ್ಲಿ ಸಂಸದರು, ಶಾಸಕರುಗಳು ಭಾಗಿಯಾಗಿದ್ದಾರೆ ಎಂದು ಮಾಜಿ ಸಚಿವ ಅಭಯ ಚಂದ್ರ ಜೈನ್ ಗಂಭೀರ ಆರೋಪ ಮಾಡಿದರು. ಅಕ್ಟೋಬರ್ 18 ರಂದು ನಡೆಯಲಿರುವ ಸುರತ್ಕಲ್ ಟೋಲ್ ಗೇಟ್ ಮುತ್ತಿಗೆ ಪ್ರತಿಭಟನೆಯ ಸಿದ್ದತೆಗಾಗಿ ಮೂಡಬಿದ್ರೆ ಸಮಾಜ ಮಂದಿರದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಸಮಾನ ಮನಸ್ಕ ಸಂಘಟನೆಗಳ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ ಮಾತನಾಡಿ ಶಾಂತಿಯುತವಾಗಿ ನಡೆಯಲಿರುವ ಟೋಲ್ ಗೇಟ್ ಮುತ್ತಿಗೆಯಲ್ಲಿ ದೊಡ್ಡ ಸಂಖ್ಯೆಯಲ್ಲಿ ಜನರು ಭಾಗವಹಿಸುವಂತೆ ಪ್ರೇರೇಪಿಸಬೇಕು, ಆ ಮೂಲಕ ಬಿಜೆಪಿಯ ಜನ ವಿರೋಧಿ ಆಡಳಿತಕ್ಕೆ ತಕ್ಕ ಪಾಠ ಕಲಿಸಲು ಸಾಧ್ಯವಾಗಬೇಕು ಎಂದು ಹೇಳಿದರು. ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಕೆ. ಯಾದವ ಶೆಟ್ಟಿ, ತಾಲೂಕು ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್, ವಕ್ತಾರ ರಾಜೇಶ್ ಕಡಲಕೆರೆ, ಪುರಸಭಾ ಸದಸ್ಯರಾದ ಸುರೇಶ್ ಕೋಟ್ಯಾನ್, ಪುರಂದರ,,ಮಹೇಶ್ ಪ್ರಭು, ಕರೀಂ, ಕಾರ್ಮಿಕ ಮುಂದಾಳುಗಳಾದ ರಮಣಿ, ಲಕ್ಷ್ಮಿ ಮೂಡಬಿದ್ರೆ, ದಲಿತ ನಾಯಕರಾದ ಎಂ ದೇವದಾಸ್, ರಘು ಎಕ್ಕಾರು, ರೈತ ಸಂಘದ ಲಿಯೋ ನಝರತ್, ಓಲ್ವಿನ್ ಮೆನೇಜಸ್, ಸುಂದರ ಶೆಟ್ಟಿ, ಜೆಡಿಎಸ್ ಜಿಲ್ಲಾ ಉಪಾಧ್ಯಕ್ಷ‌ ಆಸಿಫ್ ಮೂಡಬಿದ್ರೆ, ಸಾಮಾಜಿಕ ಕಾರ್ಯಕರ್ತರಾದ ಹೇಮಲತಾ, ಮಾನಸಿ ಶೆಟ್ಟಿ, ನಿಸಾರ್ ಕರಾವಳಿ, ಸಿರಾಜ್ ಬಜ್ಪೆ ಮತ್ತಿತರರು ಉಪಸ್ಥಿತರಿದ್ದರು.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.