logo
WhatsApp Image 2026-04-02 at 14.46.04.jpeg
hindalco everlast.jpeg

ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಎಫೆಕ್ಟ್: ರಾಜ್ಯದಾದ್ಯಂತ ಮುಂದಿನ ಮೂರು ದಿನ ಮುಂದುವರೆಯಲಿದೆ ಮಳೆ

ಟ್ರೆಂಡಿಂಗ್
share whatsappshare facebookshare telegram
2 May 2022
post image

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದ ಹಲವೆಡೆ ಭಾನುವಾರ ಉತ್ತಮ ಮಳೆಯಾಗಿದ್ದು, ಇನ್ನು ಮುಂದಿನ ಮೂರು ದಿನಗಳ ಕಾಲ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ. ಮೇ 5ರ ನಂತರ ಕರಾವಳಿ ಹಾಗೂಉತ್ತರ ಒಳನಾಡಿನ ಕೆಲವಡೆ ಸಾಧಾರಣ ಮಳೆಯಾದರೆ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ ಹಾಗೂ ಚಿಕ್ಕಬಳ್ಳಾಪುರದಲ್ಲಿ ವ್ಯಾಪಕ ಮಳೆಯಾಗಲಿದೆ.

ಉತ್ತರ ಒಳನಾಡಿಗಿಂತ ದಕ್ಷಿಣ ಒಳನಾಡಿನಲ್ಲಿ ಹೆಚ್ಚು ಮಳೆ ಬೀಳಲಿದೆ. ಮಳೆ ಬಿದ್ದರೆ ತಾಪಮಾನ ತುಸು ಕಡಿಮೆಯಾಗುತ್ತದೆ. ಆದರೆ, ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಉಷ್ಣಾಂಶ ಯಥಾಸ್ಥಿತಿಯಲ್ಲಿ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.